ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ಇದರ ವತಿಯಿಂದ ಬ್ಯಾಂಕಿನ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆಅರ್ಜಿಆಹ್ವಾನಿಸಲಾಗಿದೆ.
ಬ್ಯಾಂಕಿನ ಸದಸ್ಯರ ಮಕ್ಕ 2018-19 ನೇ ಸಾಲಿನ ಎಸ್.ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 90, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 85, ಹಾಗೂ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 75 ಹಾಗೂ ಮೇಲ್ಪಟ್ಟುಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆಅರ್ಜಿ ಸಲ್ಲಿಸಬಹುದಾಗಿದೆ.
ಪ್ರತಿಭಾ ಪುರಸ್ಕಾರದ ಅರ್ಜಿಗಳು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನಎಲ್ಲಾ ಶಾಖೆಗಳಲ್ಲಿ ಲಭ್ಯವಿದ್ದು, ಆಗಸ್ಟ್ 16 2019 ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನವಾಗಿದ್ದು ಸದಸ್ಯರುಇದರ ಸದುಪಯೋಗ ಪಡೆಯುವಂತೆ ಬ್ಯಾಂಕಿನ ಅಧ್ಯಕ್ಷರಾದ ಯಶ್ ಪಾಲ್ ಎ. ಸುವರ್ಣ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.