ಮಹಾಲಕ್ಷ್ಮೀ ಬ್ಯಾಂಕ್ ಯುಪಿಐ ಡಿಜಿಟಲ್ ಬ್ಯಾಂಕಿಂಗ್ ಸೇವೆ ಉದ್ಘಾಟನೆ : ಯಶ್ಪಾಲ್ ಸುವರ್ಣ
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ ನೂತನ ಯುಪಿಐ ಡಿಜಿಟಲ್ ಬ್ಯಾಂಕಿಂಗ್ ಸೇವೆಯ ಉದ್ಘಾಟನೆಯನ್ನು ಆಗಸ್ಟ್ 10 ಶನಿವಾರ ಮಧ್ಯಾಹ್ನ 3.00 ಗಂಟೆಗೆ ಉಡುಪಿ ಅಂಬಲಪಾಡಿ ಶ್ಯಾಮಿಲಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಸಮಾರಂಭವನ್ನು ಕೇಂದ್ರ ಸರಕಾರದ ಸಹಕಾರಿ ಸಚಿವಾಲಯದ ನೂತನ ರಾಷ್ಟೀಯ ಸಹಕಾರಿ ನೀತಿಯ ಅಧ್ಯಕ್ಷರಾದ ಶ್ರೀ ಸುರೇಶ್ ಪಿ. ಪ್ರಭು ಉದ್ಘಾಟಿಸಲಿದ್ದು, ಯಶ್ ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಡಿಜಿಟಲ್ ಬ್ಯಾಂಕಿಂಗ್ ಸೇವೆಯನ್ನು ಸಹಕಾರಿ ಸಚಿವರಾದ ಶ್ರೀ ಕೆ. ಎನ್. ರಾಜಣ್ಣ ಉದ್ಘಾಟಿಸಲಿದ್ದು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್ ಸಾಧಕರಿಗೆ ಸನ್ಮಾನ ಹಾಗೂ ಮೀನುಗಾರಿಕೆ ಮತ್ತು ಬಂದರು ಸಚಿವರಾದ ಶ್ರೀ ಮಾಂಕಾಳ ಎಸ್. ವೈದ್ಯ ರವರು ಡಿಜಿಟಲ್ ಸೇವಾ ಸೌಲಭ್ಯಗಳನ್ನು ಗ್ರಾಹಕರಿಗೆ ವಿತರಿಸಲಿದ್ದಾರೆ.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕರಾದ ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಕಾರ್ಕಳ ಶಾಸಕರಾದ ಶ್ರೀ ಸುನೀಲ್ ಕುಮಾರ್, ಕುಂದಾಪುರ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆ, ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ ಸಿ. ಕೋಟ್ಯಾನ್, ರೋಹನ್ ಕಾರ್ಪೋರೇಶನ್ ಆಡಳಿತ ನಿರ್ದೇಶಕರಾದ ಶ್ರೀ ರೋಹನ್ ಮೊಂತೆರೋ, ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಶ್ರೀ ಆನಂದ ಸಿ. ಕುಂದರ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ಶ್ರೀ ದಯಾನಂದ ಕೆ. ಸುವರ್ಣ, ಉಜ್ವಲ್ ಡೆವಲಪರ್ಸ್ ಆಡಳಿತ ನಿರ್ದೇಶಕರಾದ ಶ್ರೀ ಪುರುಷೋತ್ತಮ ಶೆಟ್ಟಿ, ಉದ್ಯಮಿಗಳಾದ ಶ್ರೀ ಆನಂದ ಪಿ. ಸುವರ್ಣ, ಶ್ರೀ ಮೋಹನ್ ಬೆಂಗ್ರೆ ಹಾಗೂ ಉರ್ವ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಲಕ್ಷ್ಮಣ್ ಅಮೀನ್ ಭಾಗವಹಿಸಲಿದ್ದಾರೆ.
ಸಂಜೆ 7.30ಕ್ಕೆ ಉಡುಪಿ ಚಿತ್ತಾರ ಹೋಟೆಲ್ ಸಭಾಂಗಣದಲ್ಲಿ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಜಿಲ್ಲೆಯ ಸಹಕಾರಿ ಮುಖಂಡರು, ಬ್ಯಾಂಕಿಂಗ್ ಕ್ಷೇತ್ರದ ಗಣ್ಯರು, ಚಾರ್ಟೆಡ್ ಅಕೌಂಟೆಂಟ್ ಹಾಗೂ ವಿವಿಧ ಕ್ಷೇತ್ರದ ಪ್ರತಿನಿಧಿಗಳು ರಾಷ್ಟೀಯ ಸಹಕಾರಿ ನೀತಿಯ ಅಧ್ಯಕ್ಷರಾದ ಸುರೇಶ್ ಪಿ. ಪ್ರಭು ರವರೊಂದಿಗೆ ಸಹಕಾರಿ ರಂಗದ ಪ್ರಸಕ್ತ ಬೆಳವಣಿಗೆಗಳ ಬಗ್ಗೆ ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.