Home Mangalorean News Kannada News ಮಹಿಳಾ ಮೀನುಗಾರರ ಸಾಲ ಮರುಪಾವತಿಗೆ ಒತ್ತಡ ಹೇರದಂತೆ ಬ್ಯಾಂಕ್‍ಗಳಿಗೆ ಆದೇಶ : ಕೋಟ ಶ್ರೀನಿವಾಸ ಪೂಜಾರಿ 

ಮಹಿಳಾ ಮೀನುಗಾರರ ಸಾಲ ಮರುಪಾವತಿಗೆ ಒತ್ತಡ ಹೇರದಂತೆ ಬ್ಯಾಂಕ್‍ಗಳಿಗೆ ಆದೇಶ : ಕೋಟ ಶ್ರೀನಿವಾಸ ಪೂಜಾರಿ 

Spread the love

ಮಹಿಳಾ ಮೀನುಗಾರರ ಸಾಲ ಮರುಪಾವತಿಗೆ ಒತ್ತಡ ಹೇರದಂತೆ ಬ್ಯಾಂಕ್‍ ಗಳಿಗೆ ಆದೇಶ : ಕೋಟ ಶ್ರೀನಿವಾಸ ಪೂಜಾರಿ 

ಉಡುಪಿ: ಬಿ ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ಘೋಷಿಸಿರುವಂತೆ ಮಹಿಳಾ ಮೀನುಗಾರರು 2017-18 ಮತ್ತು 2018-19ನೇ ಸಾಲಿನಲ್ಲಿ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಪಡೆದಿದ್ದ 50,000 ವರೆಗಿನ 60 ಕೋಟಿ ಸಾಲವನ್ನು ಮನ್ನಾ ಮಾಡಲು ಸರಕಾರ ಬದ್ಧವಾಗಿರುವುದಾಗಿ ಕರ್ನಾಟಕ ಸರಕಾರದ ಮೀನುಗಾರಿಕೆ ಮತ್ತು ಬಂದರು ಸಚಿವಾರಾದಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಈಗಾಗಲೇ ಸರಕಾರ ಈ ಯೋಜನೆಗಾಗಿ 60 ಕೋಟಿ ಮೀಸಲಿರಿಸಿದ್ದು, ರಾಷ್ಟ್ರೀಕೃತ ಬ್ಯಾಂಕುಗಳಿಂದ ಮಹಿಳಾ ಮೀನುಗಾರರ ಸಾಲದ ಬಗ್ಗೆ ಮಾಹಿತಿಯನ್ನು ಕೇಳಲಾಗಿದೆ. ಕೆಲವು ರಾಷ್ಟ್ರೀಕೃತ ಬ್ಯಾಂಕುಗಳು ಸಾಲ ಮರುಪಾವತಿ ಮಾಡಲು ಒತ್ತಡ ಹೇರುತ್ತಿರುವ ಬಗ್ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್‍ಪಾಲ್ ಸುವರ್ಣ ಸಚಿವರಲ್ಲಿ ಮನವಿ ಮಾಡಿದ ಕೂಡಲೇ ಸ್ಪಂದಿಸಿದ ಸಚಿವರು, ಜಿಲ್ಲೆಯ ಲೀಡ್ ಬ್ಯಾಂಕ್ ಮುಖ್ಯ ಪ್ರಬಂಧಕರಾದ ಶ್ರೀ ರುದ್ರೇಶ್ ರೊಂದಿಗೆ ಸಭೆ ನಡೆಸಿ ತಕ್ಷಣದಿಂದಲೇ ಬ್ಯಾಂಕುಗಳು ಮಹಿಳಾ ಮೀನುಗಾರರಿಗೆ ಸಾಲ ಮರುಪಾವತಿಗೆ ಯಾವುದೇ ರೀತಿಯಲ್ಲಿ ಒತ್ತಡ ಹೇರದಂತೆ ಆದೇಶ ನೀಡಿದ್ದಾರೆ.


Spread the love

Exit mobile version