ಮಹಿಳೆ ಮತ್ತು ಮಕ್ಕಳ ಕಾನೂನು ಅರಿವು ಕಾರ್ಯಕ್ರಮ

Spread the love

ಮಹಿಳೆ ಮತ್ತು ಮಕ್ಕಳ ಕಾನೂನು ಅರಿವು ಕಾರ್ಯಕ್ರಮ

ಮ0ಗಳೂರು : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು, ಮಂಗಳೂರು ವಕೀಲರ ಸಂಘ, ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ಜುಲೈ 11 ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಬಾಲಭವನ, ಕದ್ರಿ, ಮಂಗಳೂರು ಇಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ “ಮಹಿಳೆ ಮತ್ತು ಮಕ್ಕಳ ಕುರಿತಾದ ಕಾನೂನುಗಳು ಹಾಗೂ ಮಾನವ ಸಾಗಾಣಿಕೆಯಿಂದ ತೊಂದರೆಗೊಳಗಾದವರಿಗೆ ಮತ್ತು ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಇರುವ ಸೌಲಭ್ಯಗಳ ಬಗ್ಗೆ ಅರಿವು ಕಾರ್ಯಕ್ರಮ”ವನ್ನು ಹಮ್ಮಿಕೊಳ್ಳಲಾಗಿತ್ತು.

legal-awarness-court

ಕಾರ್ಯಕ್ರಮದ ಉದ್ಘಾಟನೆಯನ್ನು ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶೆ ಹೆಚ್.ಬಿ. ಮುಕ್ತಾ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಲ್ಲನಗೌಡ, ಹಾಗೂ ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಸ್.ಪಿ. ಚಂಗಪ್ಪ, ಇವರು ಭಾಗವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ, ಹಿರಿಯ ನ್ಯಾಯವಾದಿ, ಆಶಾ ನಾಯಕ್ ಪೋಕ್ಸೋ ಕಾಯ್ದೆಯ ಬಗ್ಗೆ, ನ್ಯಾಯವಾದಿ, ಲೀಲಾವತಿ, “ಮಹಿಳೆ ಮತ್ತು ಮಕ್ಕಳ ಕುರಿತಾದ ಕಾನೂನು” ಗಳ ಬಗ್ಗೆ, ನಿರೀಕ್ಷಕರು, ಮಹಿಳಾ ಅಭಿವೃದ್ಧಿ ನಿಗಮ. ಚಂದ್ರಿಕಾ, “ಮಾನವ ಸಾಗಾಣಿಕೆಯಿಂದ ತೊಂದರೆಗೊಳಗಾದವರಿಗೆ ಮತ್ತು ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಇರುವ ಸೌಲಭ್ಯ” ಗಳ ಕುರಿತು. ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಪೂರ್ಣಿಮ. ಕೆ. “ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ”ಯ ಬಗ್ಗೆ ಮತ್ತು ಅಂಗವಿಕಲರ ಕಲ್ಯಾಣಾದಿಕಾರಿ ಅನ್ನಪೂರ್ಣಮ್ಮ ಅಂಗವಿಕಲರಿಗೆ ಇರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.


Spread the love