ಮಹಿಳೆ ಮೇಲೆ ಹಲ್ಲೆ ಪ್ರಕರಣ: ತಪ್ಪಿತಸ್ಥರನ್ನು ಬಂಧಿಸಿ – ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹ
ಉಡುಪಿ: ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಅಮಾನವೀಯ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ನಡೆದಿದ್ದು ಇದನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ.
ಉಡುಪಿಯಂತಹ ಸುಶಿಕ್ಷಿತರ ಜಿಲ್ಲೆಯಲ್ಲಿ ಇಂತಹ ಘಟನೆ ನಡೆದಿರುವುದು ಅತ್ಯಂತ ಕಳವಳಕಾರಿ ಒಂದು ವೇಳೆ ಮಹಿಳೆ ತಪ್ಪು ಮಾಡಿದ್ದರೂ ಸಹ ಅವರನ್ನು ಪೊಲೀಸರಿಗೆ ಒಪ್ಪಿಸಿ ಕಾನೂನಾತ್ಮಕವಾಗಿ ಶಿಕ್ಷಿಸಬೇಕಿತ್ತೆ ಹೊರತು ಈ ರೀತಿ ಸಾರ್ವಜನಿಕವಾಗಿ ಮರಕ್ಕೆ ಕಟ್ಟಿ ಹಲ್ಲೆ ನಡೆಸಿರುವುದು ಅತ್ಯಂತ ಅಮಾನವೀಯ ಹಾಗೂ ಅನಾಗರಿಕ ಘಟನೆಯಾಗಿದೆ ಆದ್ದರಿಂದ ಪೊಲೀಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣವನ್ನು ದಾಖಲಿಸಿ ಆರೋಪಿಗಳನ್ನು ಬಂಧಿಸಬೇಕು ಆ ಮೂಲಕ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾಧ್ಯಕ್ಷೆಯಾಗಿರುವ ನಾಝಿಯ ನಸ್ರುಲ್ಲ ರವರು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.