ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಂದ ಡಿಕೆ ಶಿವಕುಮಾರ್ ಭೇಟಿ
ಬೆಂಗಳೂರು: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಶುಕ್ರವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಮೀನುಗಾರಿಕೆ, ಬಂದರು, ಯುವಜನ ಕ್ರೀಡಾ ಸಚಿವರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಪ್ರಮೋದ್ ಮಧ್ವರಾಜ್ ಬಳಿಕ ಬಂದ ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದರು.
ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರ ಇದ್ದ ಸಂದರ್ಭದಲ್ಲಿ ಉಡುಪಿ –ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಸೋತ ಬಳಿಕ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದ ಪ್ರಮೋದ್ ಮಧ್ವರಾಜ್ ಅವರು ಶುಕ್ರವಾರ ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡುವುದರ ಮೂಲಕ ಸಕ್ರಿಯ ರಾಜಕಾರಣಕ್ಕೆ ಬರುವ ಸೂಚನೆ ನೀಡಿದ್ದಾರೆ.