ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ಅಂತರ್ ರಾಜ್ಯ ಆರೋಪಿಗಳ ಸೆರೆ
ಮಂಗಳೂರು: ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಣಿಜ್ಯ ಪ್ರಮಾಣದ LSD ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಕಾರನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಬಂಧಿತರನ್ನು ಆದಿಲ್ ಮತ್ತು ಮಹಮ್ಮದ್ ನಿಹಾಲ್ ಎಂ ಪಿ ಎಂದು ಗುರುತಿಸಲಾಗಿದೆ
ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಯುವಕರು ತಮ್ಮಲ್ಲಿ ಮಾದಕ ವಸ್ತುವಾದ LSD ಯನ್ನು ಇರಿಸಿಕೊಂಡು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಾ ಕಾರಿನಲ್ಲಿ ಸುತ್ತಾಡುತ್ತಿದ್ದಾರೆಂದು ಮುಲ್ಕಿ ಪೊಲೀಸ್ ಠಾಣೆಯ ಪಿ.ಎಸ್.ಐ ಶ್ರೀಮತಿ ಅನಿತಾ ಹೆಚ್.ಬಿ ರವರಿಗೆ ಬಾತ್ಮೀದಾರರಿಂದ ದೊರೆತ ಖಚಿತ ಮಾಹಿತಿಯಂತೆ ಮಂಗಳೂರು ನಗರ ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತಕರಾದ ಶ್ರೀ ಶ್ರೀಕಾಂತ್ ಕೆ ರವರ ನಿರ್ದೇಶನದಂತೆ ಶ್ರೀಮತಿ ಅನಿತಾ ಹೆಚ್.ಬಿ, ಪಿ.ಎಸ್.ಐ ರವರು ತಮ್ಮ ಸಿಬ್ಬಂದಿಗಳ ಜೊತೆ ದಿನಾಂಕ: 05-10-2024 ರಂದು ಬೆಳಿಗ್ಗೆ 09-15 ಗಂಟೆಗೆ ಹಳೆಯಂಗಡಿ ಗ್ರಾಮದ ಕೊಪ್ಪಳ ವಾಣಿಜ್ಯ ಪ್ರಮಾಣದ ಸುಮಾರು 78 ಸಾವಿರ ಮೌಲ್ಯದ ಒಟ್ಟು 26 LSD ಸ್ಟಾರ್ ಸ್ಕ್ರಿಪ್ಟ್ ಮಾದಕ ವಸ್ತುವನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ.
ಆರೋಪಿಗಳು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡುವ ಸಲುವಾಗಿ ಕಾರಿನಲ್ಲಿ ಸುತ್ತಾಡುತ್ತಿರುವುದು ಕಂಡು ಬಂದಿದ್ದು, ಆರೋಪಿತರ ವರದಿಂದ ಮಾದಕ ವಸ್ತುವಾದ 26 LSD ಸ್ಟಾರ್ ಸ್ಕ್ರಿಪ್ಟ್ ಗಳನ್ನು ಹಾಗೂ 2 ಆಪಲ್ ಐ ಫೋನ್ ಮೊಬೈಲ್ ಮತ್ತು ಕೆಎಲ್-1-ಸಿಟಿ-4476 ನಂಬ್ರದ ಕಾರನ್ನು ಸ್ವಾಧೀನಪಡಿಸಲಾಗಿದೆ.
ಆರೋಪಿತರು ಕೇರಳ ರಾಜ್ಯದವರಾಗಿದ್ದು, ಪ್ರಸ್ತುತ ಮಂಗಳೂರು ನಗರದ ಹೊರವಲಯದ ಕಾರೇಜ್ ಒಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದವರಾಗಿರುತ್ತಾರೆ. ಆರೋಪಿತರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಮಾನ್ಯ ನ್ಯಾಯಾಲಯವು ಆರೋಪಿತರಿಗೆ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ.
ಈ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್, ಐ.ಪಿ.ಎಸ್ ರವರ ಮಾರ್ಗದರ್ಶನಂದಂತೆ, ಕಾನೂನು & ಸುವ್ಯವಸ್ಥೆ ವಿಭಾಗದ ಡಿಸಿಪಿ ಸಿದ್ದಾರ್ಥ ಗೋಯಲ್ ಐ.ಪಿ.ಎಸ್ ಮತ್ತು ಅಪರಾಧ ಸಿ. ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ನಿರ್ದೇಶನದಂತೆ, ಮಂಗಳೂರು ಉತ್ತರ ವಿಭಾಗದ ಎ.ಸಿ.ಪಿ. ಶ್ರೀಕಾಂತ್ ಕೆ ರವರ ಮಾರ್ಗದರ್ಶನದಲ್ಲಿ ಮುಲ್ಕಿ ಠಾಣಾ ಉಪ ನಿರೀಕ್ಷಕರಾದ ಅನಿತಾ ಹೆಚ್.ಬಿ ರವರ ನೇತೃತ್ವದಲ್ಲಿ ಈ ಪತ್ತೆ ಕಾರ್ಯದಲ್ಲಿ ಜಡೇದರ್, ಬಸವರಾಜ್, ಸಂದೀಪ್ ಮತ್ತು ಮೊಹಮ್ಮದ್ ಶಾದಾಬ್ ರವರು ಹಾಗೂ ಮಂಗಳೂರು ನಗರ ಉತ್ತರ ಉಪ ವಿಭಾಗದ ANTI DRUG SQUAD ನ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.