ಮಾಧ್ಯಮ ಮತ್ತು ಯುವಜನತೆ ವಿಶೇಷ ಉಪನ್ಯಾಸ

Spread the love

ಮಾಧ್ಯಮ ಮತ್ತು ಯುವಜನತೆ ವಿಶೇಷ ಉಪನ್ಯಾಸ

ಮೂಡುಬಿದಿರೆ: ವರದಿ, ಲೇಖನ ಮೊದಲಾದ ರೂಪಗಳಿಗೆ ಸೀಮಿತವಾಗಿದ್ದ ಮಾಧ್ಯಮ ಇಂದು ತನ್ನ ವ್ಯಾಪ್ತಿಯನ್ನು ವಿಸ್ತಾರಗೊಳಿಸಿದೆ. ಸಾಮಾಜಿಕ ಜಾಲತಾಣಗಳು ಮಹತ್ವ ಪಡೆಯುತ್ತಿವೆ. ಮಾಧ್ಯಮಗಳು ಕೂಡ ಉದ್ಯಮವಾಗಿ ಬದಲಾಗುತ್ತಿದೆ. ಅನೇಕ ಋಣಾತ್ಮಕ ಸಂಗತಿಗಳು ಮಾಧ್ಯಮಲೋಕವನ್ನು ಇಂದು ಆವರಿಸಿದರೂ ಮಾಧ್ಯಮದ ವಿಶ್ವಸಾರ್ಹತೆ ಇಂದಿಗೂ ಉಳಿದಿದೆ ಎಂದು ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗದ ಪ್ರಾಧ್ಯಾಪಕ ಡಾ. ಶ್ರೀನಿವಾಸ ಹೊಡೆಯಾಳ ಅಭಿಪ್ರಾಯಪಟ್ಟರು.

ಅವರು ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ನಡೆದ `ಮಾಧ್ಯಮ ಮತ್ತು ಯುವಜನತೆ’ ವಿಷಯದ ಕುರಿತು ನಡೆದ ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಸಾಮಾಜಿಕ ಜಾಲತಾಣಗಳು ಅಪಾಯಕಾರಿ ಪರಿಣಾಮಗಳನ್ನು ವಿಶ್ಲೇಷಿಸಿದರು.

ಪೆÇ್ರ.ಹರೀಶ್ ಟಿ.ಜಿ, ಡಾ.ಯೋಗೀಶ ಕೈರೋಡಿ ಉಪಸ್ಥಿತರಿದ್ದರು.

ಡಾ.ಕೃಷ್ಣರಾಜ ಕರಬ ಸ್ವಾಗತಿಸಿದರು. ಡಾ.ಪ್ರವೀಣ್‍ಚಂದ್ರ ವಂದಿಸಿದರು.

ಆಳ್ವಾಸ್ ಪದವಿಪೂರ್ವ ಕಾಲೇಜು ಶಿಕ್ಷಕ- ಪಾಲಕರ ಸಭೆ

ಮೂಡುಬಿದಿರೆ: ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯವನ್ನು ಬೆಳೆಸಬೇಕಾದ ಜವಾಬ್ದಾರಿ ಶಿಕ್ಷಕ ಮತ್ತು ಪಾಲಕರ ಮೇಲಿದೆ. ಪರೀಕ್ಷೆಗಳು ಸಮೀಪಿಸುತ್ತಿರುವಂತೆ ವಿದ್ಯಾರ್ಥಿಗಳು ಆಂತರಿಕ ಒತ್ತಡಕ್ಕೆ ಒಳಗಾಗುತ್ತಾರೆ. ಅದನ್ನು ಸಮರ್ಥ ಪ್ರಯತ್ನದಿಂದ ದೂರಮಾಡಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ತಿಳಿಸಿದರು.

ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳ ಪಾಲಕ – ಶಿಕ್ಷಕರ ಸಭೆಯಲ್ಲಿ ಮಾತನಾಡುತ್ತಿದ್ದರು.

ಪರೀಕ್ಷೆಗೆ ಬೇಕಾದ ತಯಾರಿಯನ್ನು ಸೂಕ್ತ ರೀತಿಯಲ್ಲಿ ಮಾಡಬೇಕು. ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡಗಳನ್ನು ಹೇರಬಾರದು. ವಿದ್ಯಾರ್ಥಿಗಳಿಗೆ ಪರೀಕ್ಷೆ ಎನ್ನುವುದು  ಕಷ್ಟವಾಗದೆ ಇಷ್ಟವಾಗುವಂತೆ ಮಾಡಬೇಕು. ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗಳ ಜೊತೆಗೆ ಪೂರಕ ಪರೀಕ್ಷೆಗಳಿಗೆ ಕೂಡ ಸೂಕ್ತ ಸಿದ್ಧತೆ ಮಾಡಬೇಕಾಗಿದೆ.  ಪದವಿ ಪೂರ್ವಶಿಕ್ಷಣ ಎಂಬುದು ಭವಿಷ್ಯದ ದೃಷ್ಟಿಯಿಂದ ಮಹತ್ವದ ಘಟ್ಟ.

ಕಾಲೇಜಿನ ವಿಜ್ಞಾನ, ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪಾಲಕರು ಸಭೆಯಲ್ಲಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಪೆÇ್ರ. ರಮೇಶ್ ಶೆಟ್ಟಿ ಸ್ವಾಗತಿಸಿದರು. ಕನ್ನಡ ಉಪನ್ಯಾಸಕರಾದ ವೇಣುಗೋಪಾಲ ಶೆಟ್ಟಿ ಹಾಗೂ ಉದಯ ಮಂಜುನಾಥ ಆಡೇಮನೆ ಕಾರ್ಯಕ್ರಮ ನಿರೂಪಿಸಿದರು.


Spread the love