Home Mangalorean News Kannada News ಮಾರ್ಚ್ 11 ರಂದು ಉಡುಪಿಯಲ್ಲಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಾವೇಶ

ಮಾರ್ಚ್ 11 ರಂದು ಉಡುಪಿಯಲ್ಲಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಾವೇಶ

Spread the love

ಮಾರ್ಚ್ 11 ರಂದು ಉಡುಪಿಯಲ್ಲಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಾವೇಶ

ಉಡುಪಿ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ ಇವರ ಮಾರ್ಗದರ್ಶನದೊಂದಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಾವೇಶವು ಭಾನುವಾರ ಮಾರ್ಚ್ 11 ರಂದು ಉಡುಪಿ ನಾರಾಯಣಗುರು ಸಭಾಭವನ ಬನ್ನಂಜೆಯಲ್ಲಿ ಆಯೋಜಿಸಿಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಉಸ್ತುವಾರಿಗಳಾದ ಪ್ರಖ್ಯಾತ್ ಶೆಟ್ಟಿ ಹೇಳಿದರು.

ಉಡುಪಿಯ ಪ್ರೆಸ್ ಕ್ಲಬ್ಬಿನಲ್ಲಿ ಆಯೋಜಿಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಸಚಿವರಾದ ಪ್ರಮೋದ್ ಮಧ್ವರಾಜ್ ಉದ್ಘಾಟಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜನಾರ್ದನ ತೋನ್ಸೆ ವಹಿಸಲಿದ್ದಾರೆ. ಬಳಿಕ ಜಿಲ್ಲೆಯ ಮಹಿಳಾ ಸಂಘಟನೆಗಳಿಗೆ ಜಿಲ್ಲಾ ಮಟ್ಟದ ಸಮೂಹ ನೃತ್ಯ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಸಮೂಹ ನೃತ್ಯ ಸ್ಪರ್ಧೆಯಲ್ಲಿ 16 ವರ್ಷ ವಯಸ್ಸಿಗೆ ಮೇಲ್ಪಟ್ಟವರಿಗೆ ಮುಕ್ತ ಅವಕಾಶವಿದ್ದು, ವಿಜೇತರಿಗೆ ನಗದು ಪುರಸ್ಕಾರ ಹಾಗೂ ಶಾಶ್ವತ ಫಲಕ ನೀಡಲಾಗುವುದು. ಪ್ರಥಮ, ದ್ವೀತಿಯ ಹಾಗೂ ತೃತೀಯಬಹುಮಾನವಿದ್ದು ಕ್ರಮವಾಗಿ 15000. 10000 ಹಾಗೂ ಐದು ಸಾವಿರ ನಗದು ಪುರಸ್ಕಾರದೊಂದಿಗೆ ಶಾಶ್ವತ ಫಲಕ ನೀಡಲಾಗುವುದು. ಅಲ್ಲದೆ ಭಾಗವಹಿಸಿದ ಪ್ರತಿ ತಂಡಕ್ಕೂ ಸಹ ಪ್ರೋತ್ಸಾಹ ಧನವನ್ನು ನೀಡಲಾಗುವುದು ಎಂದರು.
ಸಂಜೆ ಸಮಾರೋಪ ಸಮಾರಂಭ ಸಂಜೆ 3 ಗಂಟೆಗೆ ಜರುಗಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾದ ಎಂ.ಡಿ. ಲಕ್ಷ್ಮೀನಾರಾಯಣ ವಹಿಸಲಿದ್ದು, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ಪ್ರಮೋದ್ ಮಧ್ವರಾಜ್, ಶಾಸಕರಾದ ವಿನಯ್ ಕುಮಾರ್ ಸೊರಕೆ, ಗೋಪಾಲ ಪೂಜಾರಿ, ಪ್ರತಾಪ್ ಚಂದ್ರ ಶೆಟ್ಟಿ, ಕೆಪಿಸಿಸಿ ಉಪಾಧ್ಯಕ್ಷರಾದ ಮಂಜುನಾಥ ಭಂಡಾರಿ, ರಾಜ್ಯ ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷರಾದ ಎಂ. ಎ. ಗಫೂರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹೆಚ್ ಗೋಪಾಲ ಭಂಡಾರಿ, ಜಿ.ಎ.ಬಾವಾ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಗೀತಾ ವಾಗ್ಳೆ, ಜಿಲ್ಲಾ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಬಿ.ನರಸಿಂಹ ಮೂರ್ತಿ, ರಾಜ್ಯ ಇಂಟೆಕ್ ಅಧ್ಯಕ್ಷರಾದ ರಾಕೇಶ್ ಮಲ್ಲಿ, ಉಡುಪಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ ದಿನೇಶ್ ಪುತ್ರನ್, ನಗರಾಸಭಾಧ್ಯಕ್ಷ ಮೀನಾಕ್ಷಿ ಮಾಧವ ಬನ್ನಂಜೆ, ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವಾಸ್ ಅಮೀನ್, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಉಸ್ತುವಾರಿಗಳಾದ ಪ್ರಖ್ಯಾತ್ ಶೆಟ್ಟಿ, ಜಯಶ್ರೀ ಕೃಷ್ಣರಾಜ್ ಹಾಗೂ ಇತರ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ವಿಜೇತ ಸ್ಮಾರ್ಟ್ ಗೈಸ್ ಡ್ಯಾನ್ಸ್ ಅಕಾಡೆಮಿ ಉಡುಪಿ ಇವರಿಂದ ನೃತ್ಯ ವೈವಿದ್ಯ ಕಾರ್ಯಕ್ರಮ ನಡೆಯಲಿದ್ದು ಸಮಾವೇಶದಲ್ಲಿ ಉಡುಪಿ ಜಿಲ್ಲೆಯಿಂದ ಸುಮಾರು 3000 ಕ್ಕೂ ಅಧಿಕ ಹಿಂದುಳಿದ ವರ್ಗಗಳ ಘಟಕದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಜಿಲ್ಲಾಧ್ಯಕ್ಷರಾದ ಯತೀಶ್ ಕರ್ಕೆರಾ, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಉಸ್ತುವಾರಿ ಜಯಶ್ರೀ ಕೃಷ್ಣರಾಜ್, ಕಾಪು ಘಟಕದ ದೀಪಕ್ ಎರ್ಮಾಳ್, ಉಡುಪಿ ಘಟಕದ ಜತೀನ್ ಕಡೆಕಾರ್, ಬ್ರಹ್ಮಾವರ ಘಟಕದ ರಾಘವೇಂದ್ರ ಉಪಸ್ಥಿತರಿದ್ದರು.


Spread the love

Exit mobile version