Home Mangalorean News Kannada News ಮಾಲ್, ಶಾಂಪಿಂಗ್ ಕಾಂಪ್ಲೆಕ್ಸ್, ಹೊಟೇಲ್ ಸಿಬಂದಿಗಳು ಕೋವಿಡ್ -19 ತಪಾಸಣೆ ಮಾಡಿಸಿಕೊಳ್ಳಿ: ಜಿಲ್ಲಾಧಿಕಾರಿ ಜಿ ಜಗದೀಶ್

ಮಾಲ್, ಶಾಂಪಿಂಗ್ ಕಾಂಪ್ಲೆಕ್ಸ್, ಹೊಟೇಲ್ ಸಿಬಂದಿಗಳು ಕೋವಿಡ್ -19 ತಪಾಸಣೆ ಮಾಡಿಸಿಕೊಳ್ಳಿ: ಜಿಲ್ಲಾಧಿಕಾರಿ ಜಿ ಜಗದೀಶ್

Spread the love

ಮಾಲ್, ಶಾಂಪಿಂಗ್ ಕಾಂಪ್ಲೆಕ್ಸ್, ಹೊಟೇಲ್ ಸಿಬಂದಿಗಳು ಕೋವಿಡ್ -19 ತಪಾಸಣೆ ಮಾಡಿಸಿಕೊಳ್ಳಿ: ಜಿಲ್ಲಾಧಿಕಾರಿ ಜಿ ಜಗದೀಶ್

ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆ ಯಾಗುತ್ತಿದ್ದು ಈ ನಿಟ್ಟಿನಲ್ಲಿ ಹ ಮಾಲ್ ಗಳು,ಶಾಪಿಂಗ್ ಕಾಂಪ್ಲೆಕ್ಸ್ ಗಳು,ಅಂಗಡಿ ಮುಂಗಟ್ಟುಗಳು, Zomato , Swiggy ಯಂತಹ ಆಹಾರ ವಿತರಕ ಸಂಸ್ಥೆಗಳು,ಹೊಟೇಲ್ ಮತ್ತು ರೆಸ್ಟೋರೆಂಟ್ ಗಳ ತಮ್ಮ ಸಂಸ್ಥೆಯ ಸಿಬ್ಬಂದಿಗಳಿಗೆ ಕೊವಿಡ್ ತಪಾಸಣೆ ಮಾಡಿಸುವಂತೆ ಜಿಲ್ಲಾಧಿಕಾರಿ ಜಿ ಜಗದೀಶ್ ಸೂಚನೆ ನೀಡಿದ್ದಾರೆ

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆ ಯಾಗುತ್ತಿದ್ದು ಈ ನಿಟ್ಟಿನಲ್ಲಿ ಹ ಮಾಲ್ ಗಳು,ಶಾಪಿಂಗ್ ಕಾಂಪ್ಲೆಕ್ಸ್ ಗಳು,ಅಂಗಡಿ ಮುಂಗಟ್ಟುಗಳು, Zomato , Swiggy ಯಂತಹ ಆಹಾರ ವಿತರಕ ಸಂಸ್ಥೆಗಳು,ಹೊಟೇಲ್ ಮತ್ತು ರೆಸ್ಟೋರೆಂಟ್ ಗಳ ತಮ್ಮ ಸಂಸ್ಥೆಯ ಸಿಬ್ಬಂದಿಗಳಿಗೆ ಕೊವಿಡ್ ತಪಾಸಣೆ ಮಾಡಿಸುವಂತೆ ಆದೇಶ ನೀಡಲಾಗಿತ್ತು.

ಆದರೆ ಕೆಲವು ಸಂಸ್ಥೆಗಳನ್ನು ಹೊರತುಪಡಿಸಿ ಹೆಚ್ಚಿನ ಸಂಸ್ಥೆಯವರು ತಮ್ಮ ಸಿಬ್ಬಂದಿಯವರಿಗೆ ಕೋವಿಡ್ ಪರೀಕ್ಷೆ ಮಾಡಿಸದೇ ಇರುವುದು ಕಂಡುಬAದಿರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿರುವ ಎಲ್ಲಾ ಮಾಲ್ ಗಳು,ಶಾಪಿಂಗ್ ಕಾಂಪ್ಲೆಕ್ಸ್ ಗಳು,ಅಂಗಡಿ ಮುಂಗಟ್ಟುಗಳು, Zomato , Swiggy ಯಂತಹ ಆಹಾರ ವಿತರಕ ಸಂಸ್ಥೆಗಳು,ಹೊಟೇಲ್ ಮತ್ತು ರೆಸ್ಟೋರೆಂಟ್ ಗಳವರು ಕಡ್ಡಾಯವಾಗಿ ತಮ್ಮ ವ್ಯಾಪ್ತಿಗೆ ಸೇರಿದ ತಾಲೂಕು ಆರೋಗ್ಯಾಧಿಕಾರಿಯವರನ್ನು ಸಂಪರ್ಕಿಸಿ ದಿನಾಂಕವನ್ನು ನಿಗದಿಪಡಿಸಿಕೊಂಡು Rapid Antigen Test ಮೂಲಕ ತಮ್ಮ ಸಂಸ್ಥೆಯ ಎಲ್ಲಾ ಸಿಬ್ಬಂದಿಯವರಿಗೆ ತಪಾಸಣೆ ಮಾಡಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ.

ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ , ಅಂತಹ ಸಂಸ್ಥೆಯವರನ್ನು ಅಪರಾಧಿ ಎಂದು ಪರಿಗಣಿಸಿ , ಕಾಯ್ದೆಯನ್ವಯ ಕಠಿಣ ಶಿಕ್ಷೆಗೆ ಗುರಿಪಡಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ.
ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿಯ ದೂರವಾಣಿ ಸಂಖ್ಯೆ
ತಾಲೂಕು ಆರೋಗ್ಯಾಧಿಕಾರಿ ಕುಂದಾಪುರ:08254-230730
ತಾಲೂಕು ಆರೋಗ್ಯಾಧಿಕಾರಿ ಉಡುಪಿ:0820-2526428
ತಾಲೂಕು ಆರೋಗ್ಯಾಧಿಕಾರಿ ಕಾರ್ಕಳ:08258-231788


Spread the love

Exit mobile version