Home Mangalorean News Kannada News ಮಾ. 12: ಬ್ರಹ್ಮಾವರದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪತ್ರಕರ್ತರ ಒಳಾಂಗಣ ಕ್ರೀಡಾಕೂಟ

ಮಾ. 12: ಬ್ರಹ್ಮಾವರದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪತ್ರಕರ್ತರ ಒಳಾಂಗಣ ಕ್ರೀಡಾಕೂಟ

Spread the love

ಮಾ. 12: ಬ್ರಹ್ಮಾವರದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪತ್ರಕರ್ತರ ಒಳಾಂಗಣ ಕ್ರೀಡಾಕೂಟ

ಬ್ರಹ್ಮಾವರ: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರಜತ ಮಹೋತ್ಸವ ಸಮಿತಿ ಸಹಕಾರದಲ್ಲಿ ಜಿಲ್ಲಾ ಸಂಘದ ರಜತಮಹೋತ್ಸವದ ಸಂಭ್ರಮದ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ಪತ್ರಕರ್ತರ ಒಳಾಂಗಣ ಕ್ರೀಡಾಕೂಟ ಮಾರ್ಚ್ 12 ರಂದು ಅಪರಾಹ್ನ 4 ರಿಂದ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆಯಲಿದೆ.

ಕ್ರೀಡಾಕೂಟದ ಚೆಸ್, ಕ್ಯಾರಂ, ಶಟಲ್ ಬ್ಯಾಡ್ಮಿಂಟನ್ ಹಾಗೂ ಲೂಡೊ ಸ್ಪರ್ಧೆಗಳು ಜರುಗಲಿದ್ದು ಸ್ಪರ್ಧೆಗಳು 40 ವರ್ಷಗಳಿಗಿಂತ ಕೆಳಗಿನವರು ಹಾಗೂ 40 ವರ್ಷ ಮೇಲ್ಪಟ್ಟವರು ಎರಡು ವಿಭಾಗಗಳಲ್ಲಿ ನಡೆಯಿಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ರಾಜೇಶ್ ಗಾಣಿಗ ಅಚ್ಲಾಡಿ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಉದ್ಯಮಿ ಪ್ರಸಾದ್ ರಾಜ್ ಕಾಂಚನ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಪ್ರಥ್ವಿರಾಜ್ ಶೆಟ್ಟಿ, ಸಿಂಡಿಖೇಟ್ ರೈತರ ಸೇವಾ ಸಹಕಾರಿ ಸಂಘ ಕೊಕ್ಕರ್ಣೆ ಇದರ ಅಧ್ಯಕ್ಷರಾದ ಅಶೋಕ್ ಕುಮಾರ್ ಶೆಟ್ಟಿ ಮೈರ್ಮಾಡಿ, ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ಬಿರ್ತಿ ರಾಜೇಶ್ ಶೆಟ್ಟಿ, ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ಮಹೇಶ್ ಶೆಟ್ಟಿ, ನ್ಯೂ ಕರ್ನಾಟಕ ಬಿಲ್ಡರ್ಸ್ ನ ಚೇತನ್ ಕುಮಾರ್ ಶೆಟ್ಟಿ, ಕ್ರಷರ್ ಉದ್ಯಮಿಗಳಾದ ಸುರೇಶ್ ಶೆಟ್ಟಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ರಜತ ಮಹೋತ್ಸವ ಸಮಿತಿ ಸಂಚಾಲಕರಾದ ಮಹಮ್ಮದ್ ಶರೀಫ್, ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಗೌರವಾಧ್ಯಕ್ಷರಾದ ಚಿತ್ತೂರು ಪ್ರಭಾಕರ ಆಚಾರ್ಯ, ಜಿಲ್ಲಾ ಸಂಘದ ಕಾರ್ಯದರ್ಶಿ ನಝೀರ್ ಪೊಲ್ಯ, ತಾಲೂಕು ಸಂಘದ ಕಾರ್ಯದರ್ಶಿ ಹರೀಶ್ ಕಿರಣ್ ತುಂಗ, ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಗೌರವಾಧ್ಯಕ್ಷರಾದ ಎಂ ಚಂದ್ರಶೇಖರ್ ಹೆಗ್ಡೆಹಾಗೂ ಎಲ್ಲಾ ತಾಲೂಕು ಸಂಘದ ಅಧ್ಯಕ್ಷರು ಭಾಗವಹಿಸಲಿದ್ದಾರೆ ಎಂದು ತಾಲೂಕು ಸಂಘದ ಪ್ರಕಟಣೆ ತಿಳಿಸಿದೆ.


Spread the love

Exit mobile version