Home Mangalorean News Kannada News ಮೀನಿನ ಚಿಪ್ಸ್ , ಮೀನಿನಿಂದ ತಯಾರಿಸುವ ಮಸಾಲೆ ಪದಾರ್ಥಗಳಿಗೆ ಯಡಿಯೂರಪ್ಪ ಲೋಕಾರ್ಪಣೆ

ಮೀನಿನ ಚಿಪ್ಸ್ , ಮೀನಿನಿಂದ ತಯಾರಿಸುವ ಮಸಾಲೆ ಪದಾರ್ಥಗಳಿಗೆ ಯಡಿಯೂರಪ್ಪ ಲೋಕಾರ್ಪಣೆ

Spread the love

ಮೀನಿನ ಚಿಪ್ಸ್ , ಮೀನಿನಿಂದ ತಯಾರಿಸುವ ಮಸಾಲೆ ಪದಾರ್ಥಗಳಿಗೆ ಯಡಿಯೂರಪ್ಪ ಲೋಕಾರ್ಪಣೆ

ಬೆಂಗಳೂರು : ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತದಿಂದ ಮೀನಿನ ಖಾದ್ಯ ಪ್ರಿಯರಿಗಾಗಿ ಇದೇ ಮೊದಲ ಬಾರಿಗೆ ಮೀನಿನ ಚಿಪ್ಸ್, ಮೀನಿನಿಂದ ತಯಾರಿಸುವ ಮಸಾಲೆ ಪದಾರ್ಥಗಳನ್ನು ಮುಖ್ಯಮಂತ್ರಿ ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು.

ಶುಕ್ರವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮೀನುಗಾರಿಕೆ ಇಲಾಖೆಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮೀನಿನ ಮೌಲ್ಯವರ್ಧಿತ ಉತ್ಪನ್ನಗಳನ್ನು ಬಿಡುಗಡೆ ಮಾಡಿದ ಅವರು, ಮೀನು ಪ್ರಿಯರ ಬೇಡಿಕೆ ಸಲ್ಲಿಸಿದ ಹಿನ್ನೆಲೆಯಲ್ಲಿ ನಿಗಮದಿಂದ ‘ಬಂಧನ’ ಸಂಸ್ಥೆ ಸಹಭಾಗಿತ್ವದಲ್ಲಿ ಮೀನಿನ ಚಿಪ್ಸ್ ಮತ್ತು ಮಸಾಲೆ ಪದಾರ್ಥಗಳನ್ನು ಸಿದ್ಧಪಡಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ರಾಜ್ಯದಲ್ಲಿ ಮೀನುಗಾರಿಕೆ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಆದಿಮೆದಾರರಿಗೆ ಮೀನು ಹಾಗೂ ಮೀನಿನ ಮೌಲ್ಯವರ್ಧಿತ ಉತ್ಪನ್ನಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಅವಶ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಮೀನಿನ ಚಿಪ್ಸ್ ಗಳನ್ನು ತಯಾರಿಸಲಾಗುತ್ತಿದೆ ಎಂದು ಹೇಳಿದರು.

ದೇಶದಲ್ಲಿ ಮೀನುಗಾರಿಕೆ ಕ್ಷೇತ್ರದಲ್ಲಿ ಜಗತ್ತಿನ ಎರಡನೇ ಅತಿ ದೊಡ್ಡ ಮೀನುಗಾರಿಕಾ ಉತ್ಪಾದನಾ ರಾಷ್ಟ್ರವಾಗಿದೆ. ರಾಜ್ಯದಲ್ಲಿ ಸಹ ಮೀನುಗಾರಿಕೆಗೆ ವಿಪುಲ ಅವಕಾಶ ಇದ್ದು, ರಾಜ್ಯದಲ್ಲಿ ಜಲ ಸಂಪನ್ಮೂಲಗಳ ಸದ್ಬಳಕೆ ಮಾಡಿಕೊಳ್ಳಬೇಕಾದ ಅಗತ್ಯವಿದೆ. ಮುಂದಿನ ದಿನದಲ್ಲಿ ಮೀನಿನ ಹೊಸ ಉತ್ಪನ್ನಗಳನ್ನು ಉತ್ಪಾದಿಸುವ ಚಿಂತನೆ ಇದೆ ಎಂದರು.

ಇದೇ ವೇಳೆ ಮಾತನಾಡಿದ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ದಕ, ಉಡುಪಿ ಮತ್ತು ಕಾರವಾರ ಜಿಲ್ಲೆಗಳಲ್ಲಿ 20 ಕ್ಕೂ ಹೆಚ್ಚು ಬಂದರುಗಳಲ್ಲಿ ಮೀನುಗಾರಿಕೆ ನಡೆಯುತ್ತಿದೆ. ಶೇ 75 ರಷ್ಟು ರಫ್ತು ಮಾಡಲಾಗುತ್ತಿದೆ. ರಾಜ್ಯದ ಒಟ್ಟು ಮೀನು ಉತ್ಪಾದನೆಯ ಪೈಕಿ 3.89 ಲಕ್ಷ ಮೆಟ್ರಿಕ್ ಟನ್ ಕಡಲ ಮೀನುಗಾರಿಕೆಯಿಂದ ಬರುತ್ತಿದೆ. ಇದರಲ್ಲಿ 1.44 ಲಕ್ಷ ಮೆಟ್ರಿಕ್ ಟನ್ ರಾಜ್ಯದಿಂದ ರಫ್ತು ಮಾಡಲಾಗಿದೆ. ಮೀನು ಬಹಳ ಬೇಗ ಕೆಡುತ್ತದೆ. ಹೀಗಾಗಿ ಮೀನುಗಾರರಿಗೆ ನಷ್ಟ ಸಂಭವಿಸುತ್ತದೆ. ಆದ್ದರಿಂದ ಮೀನುಗಾರಿಕೆಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಮೀನಿನ ಮೌಲ್ಯವರ್ಧನರೆ ಪ್ರಮುಖವಾಗಲಿದೆ. ಮೀನಿನ ಚಿಪ್ಸ್ ನಂತಹ ಉತ್ಪನ್ನಗಳನ್ನು ಉತ್ಪಾದಿಸಿ ಹೊಸ ಮಾರುಕಟ್ಟೆ ಕಲ್ಪಿಸುವ ಮೂಲಕ ಮೀನುಗಾರಿಕೆ ಉದ್ಯಮವಾಗಿ ಬೆಳೆಸುವ ಚಿಂತನೆ ಇದೆ ಎಂದರು


Spread the love

Exit mobile version