ಮೀನುಗಾರರ ನಿಯೋಗದಿಂದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಭೇಟಿ

Spread the love

ಮೀನುಗಾರರ ನಿಯೋಗದಿಂದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಭೇಟಿ

ಉಡುಪಿ: ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ತೆರಳಿದ ಮೀನುಗಾರರ ನಿಯೋಗ ಕೇಂದ್ರ ವಿತ್ತ ಸಚಿವರಾದ   ನಿರ್ಮಲ ಸೀತಾರಾಮನ್ ರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಸುವರ್ಣ ತ್ರಿಭುಜ ಬೋಟ್ ನಾಪತ್ತೆಯಾದ ಪ್ರಕರಣದಲ್ಲಿ 7 ಮಂದಿ ಮೀನುಗಾರರಿಗೆ ಗರಿಷ್ಟ ಪರಿಹಾರ, ಫಿಶ್ ಮಿಲ್ ಉದ್ಯಮಕ್ಕೆ ವಿಧಿಸಿರುವ ಜಿಎಸ್ಟಿ ರದ್ದುಗೊಳಿಸುವ ಬಗ್ಗೆ ಹಾಗೂ ಮೀನುಗಾರಿಕೆಗೆ ಬಳಸುವ ಡೀಸೆಲ್ ಮೇಲಿನ ರೋಡ್ ಸೆಸ್ ವಿನಾಯಿತಿ ನೀಡುವಂತೆ ಮಾನ್ಯ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವರು ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ   ಬಿ ಎಸ್ ಯಡಿಯೂರಪ್ಪ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಮಲ್ಪೆ ಮೀನುಗಾರರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಸತೀಶ್ ಕುಂದರ್, ಮೀನುಗಾರ ಮುಖಂಡರಾದ ನಿತಿನ್ ಕುಮಾರ್, ಜೆ ಪಿ ಮೆಂಡನ್, ಹರೀಶ್ ಕುಂದರ್, ಗೋಪಾಲ ಆರ್ ಕೆ ಮೊದಲಾದವರು ಉಪಸ್ಥಿತರಿದ್ದರು.


Spread the love