Home Mangalorean News Kannada News ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಸಾಧ್ಯತೆ: ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಸಾಧ್ಯತೆ: ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ

Spread the love

ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಸಾಧ್ಯತೆ: ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಮೂರು – ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಮುಂದಿನ 24 ಗಂಟೆಗಳಲ್ಲಿ ಭಾರಿ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಆದ್ದರಿಂದ ಮುಂದಿನ 24 ಗಂಟೆ ಕರಾವಳಿ ಪ್ರದೇಶದಲ್ಲಿ ಯಾವುದೇ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕಕ್ಕೆ ಅಥವಾ ನದಿ ಪಾತ್ರಕ್ಕೆ ತೆರಳದಂತೆ ಸೂಚಿಸಲಾಗಿದ್ದು, ತಗ್ಗು ಪ್ರದೇಶದಲ್ಲಿ ಹಾಗೂ ನದಿ ತೀರದಲ್ಲಿ ವಾಸಿಸುವ ಸಾರ್ವಜನಿಕರು ಸಹ ತಗ್ಗು ಪ್ರದೇಶ, ನದಿ ತೀರಕ್ಕೆ ತೆರಳದಂತೆ ಸೂಚಿಲಾಗಿದೆ. ಈಗಾಗಲೇ ಶಾಲಾ ಮಕ್ಕಳಿಗೆ ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಲಾಗಿದ್ದು, ನೀರಿರುವ ತಗ್ಗು ಪ್ರದೇಶಗಳಿಗೆ ಹಾಗೂ ನದಿ ತೀರಗಳಿಗೆ ತೆರಳದಂತೆ ಪಾಲಕರು ಎಚ್ಚರ ವಹಿಸಲು ಸೂಚಿಲಾಗಿದೆ.

ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯನೀರ್ವಹಿಸುತ್ತಿರುವ ಕಂಟ್ರೋಲ್ ರೂಂ ಸಂಖ್ಯೆ 1077 ಗೆ ಕರೆ ಮಾಡಿ ದೂರು ನೀಡಬಹುದು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version