ಮುಖ್ಯಮಂತ್ರಿಗಳ ಗ್ಯಾರಂಟಿ ಸಮಾವೇಶಕ್ಕೆ ವಿದ್ಯಾರ್ಥಿಗಳ ದುರ್ಬಳಕೆ : ಯಶ್ಪಾಲ್ ಸುವರ್ಣ ಆಕ್ರೋಶ
ಉಡುಪಿಯಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಆಯೋಜಿಸಿರುವ ಸರ್ಕಾರದ ಗ್ಯಾರಂಟಿ ಸಮಾವೇಶಕ್ಕೆ ವಿದ್ಯಾರ್ಥಿಗಳನ್ನು ಕರೆತರುವಂತೆ ಕಾಲೇಜು ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆಯ ಮೂಲಕ ಒತ್ತಡ ಹೇರುತ್ತಿರುವ ಸರ್ಕಾರದ ವಿರುದ್ಧ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷದ ಪರೀಕ್ಷೆಗೆ ತಯಾರಿ ನಡೆಸುವ ಸಂದರ್ಭದಲ್ಲಿ ಸರಕಾರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ.
ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದರೆ ಇಂದು ಸಮಾವೇಶಕ್ಕೆ ಫಲಾನುಭವಿಗಳ ಬದಲು ವಿದ್ಯಾರ್ಥಿಗಳನ್ನು ಕರೆತರಲು ಶಾಲಾ ಕಾಲೇಜು ಮುಖ್ಯಸ್ಥರಿಗೆ ಒತ್ತಡ ಹೇರುವ ಸಂದರ್ಭ ಸೃಷ್ಟಿಯಾಗಿರುವುದು ರಾಜ್ಯ ಸರಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ.
ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಣ ವ್ಯವಸ್ಥೆಯ ಅಭಿವೃದ್ಧಿಗೆ ಯಾವುದೇ ವಿಶೇಷ ಯೋಜನೆ ರೂಪಿಸದ ಸರ್ಕಾರ ಸಮಾವೇಶಕ್ಕೆ ಮಾತ್ರ ವಿದ್ಯಾರ್ಥಿಗಳನ್ನು ಬಳಸುತ್ತಿರುವುದು ಅಕ್ಷಮ್ಯ ಅಪರಾಧವಾಗಿದ್ದು, ವಿದ್ಯಾರ್ಥಿಗಳ ಪೋಷಕರು ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ