ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿಯಾಗಿ ಎನ್ ಆರ್ ಸಂತೋಷ್ ನೇಮಕ
ಬೆಂಗಳೂರು : ಎನ್ .ಆರ್ ಸಂತೋಷ ಅವರನ್ನ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಎನ್ ಆರ್ ಸಂತೋಷ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಗ್ರಾಮದಲ್ಲಿ ಜನಿಸಿದ್ದಾರೆ.
ಬೆಂಗಳೂರಿನ ಚನ್ನೇನಹಳ್ಳಿ ಯಲ್ಲಿರುವ ಆರ್ ಎಸ್ ಎಸ್ ಜನಸಂಘ ಶಾಲೆಯಲ್ಲಿ ಪ್ರಾರ್ಥಮಿಕ ಹಾಗೂ ಮಾಧ್ಯಮಿಕ ಶಿಕ್ಷಣ ಪಡೆದಿದ್ದಾರೆ.
2006 ನೇ ಇಸವಿಯಿಂದ ಎ.ಬಿ.ವಿ.ಪಿ ಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ತಾಲೂಕು ,ಜಿಲ್ಲೆ ಮತ್ತು ರಾಜ್ಯಮಟ್ಟದಲ್ಲಿ ಕೆಲಸ ಮಾಡಿದ್ದಾರೆ .
2012 ರಿಂದ ಜನನಾಯಕ ಹಾಗೂ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿರುವ ಬಿಎಸ್ ಯಡಿಯೂರಪ್ಪ ಅವರ ಜೊತೆ ಹಗಲಿರುಳು ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಿದ್ದಾರೆ .
ಪಕ್ಷ ಸಂಘಟನೆ ಹಾಗೂ ಚುನಾವಣೆ ಕಾರ್ಯಗಳಲ್ಲಿ ತಮ್ಮದೇ ಚಾಣಾಕ್ಷತನ ತೋರಿದ್ದಾರೆ.
ಯುವ ನಾಯಕತ್ವಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸಂತೋಷ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ .