Home Mangalorean News Kannada News ಮುಡಾ ಹಗರಣಕ್ಕೆ : 14 ನಿವೇಶನಗಳನ್ನು ವಾಪಾಸ್ ಮಾಡಲು ನಿರ್ಧರಿಸಿದ ಸಿಎಂ ಪತ್ನಿ ಪಾರ್ವತಿ

ಮುಡಾ ಹಗರಣಕ್ಕೆ : 14 ನಿವೇಶನಗಳನ್ನು ವಾಪಾಸ್ ಮಾಡಲು ನಿರ್ಧರಿಸಿದ ಸಿಎಂ ಪತ್ನಿ ಪಾರ್ವತಿ

Spread the love

ಮುಡಾ ಹಗರಣಕ್ಕೆ : 14 ನಿವೇಶನಗಳನ್ನು ವಾಪಾಸ್ ಮಾಡಲು ನಿರ್ಧರಿಸಿದ ಸಿಎಂ ಪತ್ನಿ ಪಾರ್ವತಿ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಕೊನೆಗೂ ಮೌನ ಮುರಿದಿದ್ದು, ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಾಸ್ ಮಾಡಲು ನಿರ್ಧರಿಸಿದ್ದಾರೆ.

ಈ ಕುರಿತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಪತ್ರ ಬರೆದಿರುವ ಅವರು ಮೈಸೂರು ತಾಲೂಕು ಕಸಬಾ ಹೋಬಳಿ, ಕೆಸರೆ ಗ್ರಾಮದ ಸರ್ವೆನಂ 464 ರಲ್ಲಿ 3 ಎಕರೆ 16 ಗುಂಟೆ ವಿಸ್ತೀರ್ಣದ ನನ್ನ ಜಮೀನನ್ನು ಪ್ರಾಧಿಕಾರುವ ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪರಿಹಾರವಾಗಿ ವಿಜಯನಗರ 3 ಮತ್ತು 4ನೇ ಹಂತದಲ್ಲಿ ವಿವಿಧ ಅಳತೆಯ 14 ನಿವೇಶನಗಳನ್ನು ಮಂಜೂರು ಮಾಡಿರುವುದು ನಿಮಗೆ ತಿಳಿದಿದೆ.

ಮುಂದುವರಿದು ಮೈಸೂರು ನಗರಾಭಿವೃದ್ಧಿಸ ಪ್ರಾಧಿಕಾರದಿಂದ ನನ್ನ ಪರವಾಗಿ ಕಾರ್ಯಗತಗೊಳಿಸಿದ 14 ನಿವೇಶನಗಳ ಕ್ರಯಪತ್ರಗಳನ್ನು ರದ್ದುಗೊಳಿಸುವ ಮೂಲಕ ನಾನು ಪರಿಹಾರದ ನಿವೇಶನಗಳನ್ನು ಒಪ್ಪಿಸಲು ಮತ್ತು ಹಿಂತಿರುಗಿಸಲು ಬಯಸುತ್ತೇನೆ. ನಿವೇಶನಗಳ ಸ್ವಾಧೀನವನ್ನು ಸಹ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮರಳಿ ಹಸ್ತಾಂತರಿಸುತ್ತಿದ್ದೇನೆ. ದಯವಿಟ್ಟು ಈ ನಿಟ್ಟಿನಲ್ಲಿ ಆದಷ್ಟು ಬೇಗ ಅಗತ್ಯ ಕ್ರಮಗಳನ್ನು ಕೈಗೊಳ್ಳೀ ಎಂದು ಪತ್ರದಲ್ಲಿ ತಿಳಿಸಿದ್ದಾರೆ.


Spread the love

Exit mobile version