ಮುಲ್ಕಿ: ಪಕ್ಷಿಕೆರೆಯಲ್ಲಿ ಕೊಲೆ ಪ್ರಕರಣ: ಬಂಧಿಸಲ್ಪಟ್ಟ ಕಾರ್ತಿಕ್ ಭಟ್ ತಾಯಿ, ಸಹೋದರಿ ಆಸ್ಪತ್ರೆಗೆ ದಾಖಲು

Spread the love

ಮುಲ್ಕಿ: ಪಕ್ಷಿಕೆರೆಯಲ್ಲಿ ಕೊಲೆ ಪ್ರಕರಣ: ಬಂಧಿಸಲ್ಪಟ್ಟ ಕಾರ್ತಿಕ್ ಭಟ್ ತಾಯಿ, ಸಹೋದರಿ ಆಸ್ಪತ್ರೆಗೆ ದಾಖಲು

ಮಂಗಳೂರಿನಲ್ಲಿ ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ಮೃತ ಕಾರ್ತಿಕ್ ತಾಯಿ ಶ್ಯಾಮಲಾ ಭಟ್, ಸಹೋದರಿ ಕಣ್ಮಣಿ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

 

ಹತ್ಯೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಇಬ್ಬರನ್ನೂ ಮುಲ್ಕಿ ಠಾಣೆಯ ಪೊಲೀಸರು ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸೋ ಮೊದಲೇ ತಲೆತಿರುಗಿ ಪರಿಣಾಮ ಇಬ್ಬರನ್ನೂ ಪೊಲೀಸರು ಮೂಡಬಿದ್ರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಸದ್ಯ ಇಬ್ಬರೂ ಆರೋಪಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರ್ತಿಕ್ ಭಟ್ ನೈಜೀರಿಯಾದಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿ ಕೆಲಸ ಬಿಟ್ಟು ಬಂದ ಬಳಿಕ ಕಾರ್ತಿಕ್ ಭಟ್ ಊರಿನಲ್ಲಿ ಸರಿಯಾದ ಕೆಲಸ ಸಿಗದೆ ಆರ್ಥಿಕ ಮುಗ್ಗಟ್ಟಿನಿಂದ ಮತ್ತು ಆನ್ಲೈನ್ ಆಟದಿಂದ ನಷ್ಟ ಅನುಭವಿಸಿದ್ದ ಎಂದು ತಿಳಿದುಬಂದಿದೆ. ಈ ನಡುವೆ ಕಣ್ಮಣಿ ಭಟ್, ಕಾರ್ತಿಕ್ ಭಟ್ ಹಾಗೂ ಆತನ ಪತ್ನಿ ಸಮೇತ ಮನೆಯಿಂದ ಹೊರ ಹಾಕುವ ಯತ್ನದ ಬಗ್ಗೆ ತಾಯಿ ಜೊತೆ ಪ್ಲಾನ್ ಮಾಡಿದ್ದಳು ಎನ್ನಲಾಗಿದೆ. ಇದರಿಂದ ಬೇಸತ್ತ ಕಾರ್ತಿಕ್ ಭಟ್ ಏಕಾಏಕಿ ತನ್ನ ಪತ್ನಿ ಹಾಗೂ ಮಗುವನ್ನು ಕೊಲೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಪೊಲೀಸರು ಶಂಕಿಸಿದ್ದು, ಡೆತ್ ನೋಟ್ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Spread the love