ಮೂಡಾ ಹಗರಣ: ನಿವೃತ್ತ ನ್ಯಾಯಾಧೀಶರಾದ ಪಿ ಎನ್ ದೇಸಾಯಿ ನೇತೃತ್ವದಲ್ಲಿ ತನಿಖೆಗೆ ಆದೇಶ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆಯಲ್ಲಿ ಆಗಿರುವ ಆರೋಪಗಳ ಕುರಿತು ವಿಚಾರಣೆ ನಡೆಸಲು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಪಿ ಎನ್ ದೇಸಾಯಿ ಅವರ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಸದರಿ ವಿಚಾರಣಾ ಆಯೋಗವು ತನಿಖೆಯನ್ನು 6 ತಿಂಗಳ ಒಳಗಾಗಿ ಪೂರ್ಣಗೊಳಿಸಿ ಸರಕಾರಕ್ಕೆ ವರದಿ ಸಲ್ಲಿಸಲು ಸೂಚಿಸಿದೆ.