Home Mangalorean News Kannada News ಮೂಡುಬೆಳ್ಳೆ: ದುಷ್ಕರ್ಮಿಗಳಿಂದ ಖಾಸಗಿ ಸ್ಥಳದಲ್ಲಿದ್ದ ಶಿಲುಬೆ ಧ್ವಂಸ ಆರೋಪ – ಪ್ರಕರಣ ದಾಖಲು

ಮೂಡುಬೆಳ್ಳೆ: ದುಷ್ಕರ್ಮಿಗಳಿಂದ ಖಾಸಗಿ ಸ್ಥಳದಲ್ಲಿದ್ದ ಶಿಲುಬೆ ಧ್ವಂಸ ಆರೋಪ – ಪ್ರಕರಣ ದಾಖಲು

Spread the love

ಮೂಡುಬೆಳ್ಳೆ: ದುಷ್ಕರ್ಮಿಗಳಿಂದ ಖಾಸಗಿ ಸ್ಥಳದಲ್ಲಿದ್ದ ಶಿಲುಬೆ ಧ್ವಂಸ ಆರೋಪ – ಪ್ರಕರಣ ದಾಖಲು

ಉಡುಪಿ: ಕಾಪು ತಾಲೂಕು ಕಟ್ಟಿಂಗೇರಿ ಗ್ರಾಮದ ಕುದುರೆಮಲೆ ಎಂಬಲ್ಲಿ ಖಾಸಗಿ ಸ್ಥಳದಲ್ಲಿದ್ದ ಶಿಲುಬೆಯೊಂದನ್ನು ಕಿಡಿಗೇಡಿಗಳು ಧ್ವಂಸಗೊಸಿರುವ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೆಬ್ರವರಿ 19 ರಂದು ಕಟ್ಟಿಂಗೇರಿ ಗ್ರಾಮದ ಕುದುರೆಮಲೆ ಬೆಟ್ಟದಲ್ಲಿದ್ದ ಪವಿತ್ರ ಶಿಲುಬೆಯನ್ನು ಯಾರೋ ದುಷ್ಕರ್ಮಿಗಳು ಕೆಡವಿ ದ್ವಂಸ ಮಾಡಿರುವುದು ಗಮನಕ್ಕೆ ಬಂದಿದೆ. ಈ ಪವಿತ್ರ ಶಿಲುಬೆಯು ಕ್ರೈಸ್ತ ಸಮುದಾಯದ ಹಾಗೂ ಕುಟುಂಬದ ಪೂಜಾ ಸ್ಥಳವಾಗಿದ್ದು ಧಾರ್ಮಿಕ ಪವಿತ್ರತೆಗೆ ಒಳಗೊಂಡಿದೆ. ಇದರಿಂದ ಕೃತ್ಯದಿಂದ ತಮಗೆ ಅಘಾತವಾಗಿದ್ದು ಕ್ರೈಸ್ತ ಧರ್ಮಕ್ಕೆ ಅಪಮಾನವಾಗಿದೆ. ಹಾಗೂ ತಮ್ಮ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಎಂದು ಕಟ್ಟಿಂಗೇರಿ ನಿವಾಸಿ ಪ್ಲಾಲೀವನ್ ಎಂಬವರು ಶಿರ್ವ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಶಿರ್ವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.


Spread the love

Exit mobile version