ಮೂಲರಪಟ್ನ :ಸಚಿವ ಯು.ಟಿ. ಖಾದರ್ ಭೇಟಿ
ಮ0ಗಳೂರು: ಮೂಲರಪಟ್ನ ಸೇತುವೆ ಕುಸಿತ ಪ್ರದೇಶಕ್ಕೆ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯುಟಿ ಖಾದರ್ ಅವರು ಇಂದು ಭೇಟಿ ನೀಡಿದರು.
ಸೇತುವೆ ಕುಸಿತ ಸ್ಥಳವನ್ನು ವೀಕ್ಷಿಸಿದ ಸಚಿವರು ಬಳಿಕ ತಾತ್ಕಾಲಿಕ ರಸ್ತೆ ನಿರ್ಮಾಣ ಕಾಮಗಾರಿ ವೀಕ್ಷಿಸಿದರು. ಬಳಿಕ ಸ್ಥಳಿಯರೊಂದಿಗೆ ಸಮಾಲೋಚಿಸಿದ ಸಚಿವರು ನೂತನ ಸೇತುವೆ ನಿರ್ಮಾಣ ಕಾಮಗಾರಿಯನ್ನು ರಾಜ್ಯ ಸರ್ಕಾರವು ಆದ್ಯತೆಯಲ್ಲಿ ಕೈಗೆತ್ತಿಕೊಳ್ಳಲಿದೆ. ಮಳೆಗಾಲದ ನಂತರ ಈ ಬಗ್ಗೆ ಸ್ಪಷ್ಟ ನಿರ್ಧಾರಕ್ಕೆ ಬರಲಾಗುವುದು. ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗದಂತೆ ತಾತ್ಕಾಲಿಕ ಪರಿಹಾರ ಕ್ರಮಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಈ ನಿಟ್ಟಿನಲ್ಲಿ ಕೆ.ಎಸ್.ಆರ್.ಟಿ.ಸಿ. ವತಿಯಿಂದ ಕೂಡಲೇ ತಾತ್ಕಾಲಿಕ ಬಸ್ ಸಂಚಾರ ಆರಂಭಿಸಲು ಸಚಿವರು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಸೂಚಿಸಿದರು.
ಮೂಲರಪಟ್ನದಿಂದ ನದಿಯ ಇನ್ನೊಂದು ಬದಿಗೆ ಸಂಚರಿಸಲು ಬೋಟ್ ಸಂಚಾರ ಆರಂಭಿಸುವ ಬಗ್ಗೆ ಗಂಭೀರವಾಗಿ ಪರಿಶೀಲಿಸಲು ಅವರು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ , ಸಹಾಯಕ ಆಯುಕ್ತ ರೇಣುಕಾ ಪ್ರಸಾದ್ ತಹಶೀಲ್ದಾರ್ ಸಂತೋಷ್ ಕುಮಾರ್ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.