Home Mangalorean News Kannada News ಮೇ 07ರಿಂದ 12ರ ವರೆಗೆ ದಕ, ಉಡುಪಿ ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ

ಮೇ 07ರಿಂದ 12ರ ವರೆಗೆ ದಕ, ಉಡುಪಿ ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ

Spread the love

ಮೇ 07ರಿಂದ 12ರ ವರೆಗೆ ದಕ, ಉಡುಪಿ ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೇ07ರಿಂದ 12ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಗದಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಇಂದು ಮಳೆಯಾಗಲಿದೆ.

ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು ಚಿತ್ರದುರ್ಗದಲ್ಲಿ ಮೇ 8ರ ಬಳಿಕ ಮಳೆಯಾಗಲಿದೆ. ಭಾನುವಾರ ಚಾಮರಾಜನಗರದಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 44.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಅಥವಾ ನಾಳೆ ಮಳೆಯಾಗುವ ಸಾಧ್ಯತೆ ಇದ್ದು, ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಎಚ್ಎಎಲ್ನಲ್ಲಿ 38.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 39.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್ನಲ್ಲಿ 42.0 ಡಿಗ್ರಿ ಸೆಲ್ಸಿಯಸ್ ಗರಿಷಠ ಉಷ್ಣಾಂಶ, 27.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ವಿಜಯಪುರದಲ್ಲಿ 42.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಗದಗದಲ್ಲಿ 40.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 43.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

Exit mobile version