Home Mangalorean News Kannada News ಮೇ 5ರಿಂದ ಮಂಗಳೂರಿನಲ್ಲಿ ನೀರಿನ ರೇಶನಿಂಗ್ ಆರಂಭ

ಮೇ 5ರಿಂದ ಮಂಗಳೂರಿನಲ್ಲಿ ನೀರಿನ ರೇಶನಿಂಗ್ ಆರಂಭ

Spread the love

ಮೇ 5ರಿಂದ ಮಂಗಳೂರಿನಲ್ಲಿ ನೀರಿನ ರೇಶನಿಂಗ್ ಆರಂಭ

ಮಂಗಳೂರು: ನೇತ್ರಾವತಿ ನದಿಯ ನೀರಿನ ಒಳಹರಿವು ನಿಂತಿರುವುದರಿಂದ ಮತ್ತು ಬೇಸಿಗೆಯ ಬಿರು ಬಿಸಿಲಿನಿಂದಾಗಿ ಮಂಗಳೂರು ಮಹಾ ನಗರಪಾಲಿಕೆಯ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿರುವುದರಿಂದ ಮೇ 5ರಿಂದ ನೀರಿನ ರೇಶನಿಂಗ್ ಆರಂಭಿಸಲಾಗುವುದು ಎಂದು ಮನಪಾ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಲಭ್ಯವಿರುವ ನೀರನ್ನು ಮಂಗಳೂರು ನಗರ (ಮಂಗಳೂರು ನಗರ ದಕ್ಷಿಣ) ಮತ್ತು ಸುರತ್ಕಲ್ (ಮಂಗಳೂರು ನಗರ ಉತ್ತರ ಭಾಗಕ್ಕೆ ಪರ್ಯಾಯ ದಿನಗಳಲ್ಲಿ (Alternative days) ನೀರು ಬಿಡಲು ಕ್ರಮ ವಹಿಸಲಾಗಿದೆ.

ಅದರಂತೆ ಮೇ 5ರಿಂದ ಬೆಸ ದಿನಗಳಲ್ಲಿ ಬೆಂದೂರು ಸ್ಥಾವರದಿಂದ ಕೋರ್ಟ್ ಪ್ರದೇಶ, ಕಾರ್ಸ್ಪೀಟ್, ಬಾವುಟಗುಡ್ಡ ಆಕಾಶವಾಣಿ, ಪದವು, ಗೋರಿಗುಡ್ಡ ಸೂಟರ್ಪೇಟೆ, ಶಿವಬಾಗ್, ಕದ್ರಿ, ವಾಸ್ಲೇನ್, ಬೆಂದೂರು, ಲೋವರ್ ಬೆಂದೂರು, ಕುದ್ರೋಳಿ, ಕೋಡಿಯಾಲ್ ಬೈಲ್ ಮತ್ತು ಪಡೀಲ್ ಸ್ಥಾವರದಿಂದ ಮಂಗಳಾದೇವಿ, ಅತ್ತಾವರ, ಬಾಬುಗುಡ್ಡ ವೆಲೆನ್ಸಿಯಾ, ಜಪ್ಪಿನಮೊಗರು, ಬಿಕರ್ನಕಟ್ಟೆ, ಉಲ್ಲಾಸ್ನಗರ, ಬಜಾಲ್, ತಿರುವೈಲು, ವಾಮಂಜೂರು ಹಾಗೂ ಶಕ್ತಿನಗ ಟ್ಯಾಂಕ್ನಿಂದ ಕುಂಜತ್ತಬೈಲ್, ಮೊಗ್ರೆಡಿ, ಶಕ್ತಿನಗರ, ಸಂಜಯನಗರ, ಪ್ರೀತಿನಗರ, ಮಂಜಡ್ಕ ರಾಜೀವ ನಗರ, ಬೋಂದೆಲ್, ಗಾಂಧಿ ನಗರ, ಶಾಂತಿನಗರ, ಕಾವೂರು ಮತ್ತು ತುಂಬೆ-ಪಣಂಬೂರು ನೇರ ಲೈನ್ನಿಂದ ಕಂಕನಾಡಿ, ನಾಗುರಿ, ಪಂಪ್ವೆಲ್, ಬಳ್ಳೂರುಗುಡ್ಡೆ ಪಡೀಲ್ಗೆ ನೀರು ಪೂರೈಕೆ ಮಾಡಲಾಗುವುದು.

ಮೇ 6ರಿಂದ ಪಣಂಬೂರು ಸ್ಥಾವರದಿಂದ ಸುರತ್ಕಲ್, ಎನ್ಐಟಿಕೆ, ಮುಕ್ಕ ಹೊಸಬೆಟ್ಟು ಕುಳಾಯಿ, ಜನತಾ ಕಾಲನಿ, ಬೈಕಂಪಾಡಿ, ಪಣಂಬೂರು, ಮೀನಕಳಿಯ ಮತ್ತು ಪಡೀಲ್ ಸ್ಥಾವರದಿಂದ ಬಜಾಲ್, ಜಲ್ಲಿಗುಡ್ಡ ಮುಗೇರ್, ಎಕ್ಕೂರು, ಸದಾಶಿವ ನಗರ, ಅಳಪೆ, ಮೇಘ ನಗರ, ಮಂಜಳಿಕೆ, ಕಂಕನಾಡಿ ರೈಲ್ವೆ ಸ್ಟೇಷನ್, ಕುಡುಪು, ಪಾಂಡೇಶ್ವರ, ಸ್ಟೇಟ್ ಬ್ಯಾಂಕ್, ಗೂಡ್ಸ್ಶೆಡ್. ಬಂದರ್ ದಕ್ಕೆ ಕಣ್ಣೂರು, ನಿಡ್ಡೆಲ್, ಶಿವನಗರ, ಕೊಡಕ್ಕಲ್, ನೂಜಿ, ಸರಿಪಳ್ಳ, ಉಲ್ಲಾಸ್ ನಗರ, ವೀರನಗದ ಹಾಗೂ ಶಕ್ತಿನಗರ ಟ್ಯಾಂಕ್ನಿಂದ ಕಂಡೆಟ್ಟು, ಕುಲಶೇಖರ, ಮರೋಳಿ, ಕಕ್ಕೆಬೆಟ್ಟು, ಸಿಲ್ವರ್ ಗೇಟ್, ಕೊಂಗೂರು ಮಠ, ಪ್ರಶಾಂತ್ ನಗರ ಮತ್ತು ತುಂಬೆ-ಪಣಂಬೂರು ನೇರ ಲೈನ್ನಿಂದ ಮುಡಾ ಪಂಪ್ ಹೌಸ್, ಕೊಟ್ಟಾರ ಚೌಕಿ ಪಂಪ್ಹೌಸ್, ಕೂಳೂರು ಪಂಪ್ಹೌಸ್, ಕಾಪಿಕ್ಕಾಡ್, ದಡ್ಡಲ್ಕಾಡ್, ಬಂಗ್ರ ಕೂಳೂರುಗೆ ನೀರು ಸರಬರಾಜು ಮಾಡಲಾಗುವುದು ಎಂದು ತಿಳಿಸಿದ್ದಾರೆ.


Spread the love

Exit mobile version