Home Mangalorean News Kannada News ಮೋದಿ ಕಾರ್ಯಕ್ರಮಕ್ಕೆ ಪೆಂಡಾಲ್ ಸಾಗಿಸುತ್ತಿದ್ದ ಟೆಂಪೋ ಅಫಘಾತ ; ಮೂವರು ಕಾರ್ಮಿಕರ ಸಾವು

ಮೋದಿ ಕಾರ್ಯಕ್ರಮಕ್ಕೆ ಪೆಂಡಾಲ್ ಸಾಗಿಸುತ್ತಿದ್ದ ಟೆಂಪೋ ಅಫಘಾತ ; ಮೂವರು ಕಾರ್ಮಿಕರ ಸಾವು

Spread the love
RedditLinkedinYoutubeEmailFacebook MessengerTelegramWhatsapp

ಮೋದಿ ಕಾರ್ಯಕ್ರಮಕ್ಕೆ ಪೆಂಡಾಲ್ ಸಾಗಿಸುತ್ತಿದ್ದ ಟೆಂಪೋ ಅಫಘಾತ ; ಮೂವರು ಕಾರ್ಮಿಕರ ಸಾವು

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹಾಕಲು ಪೆಂಡಲ್ ಸಾಗಿಸುತ್ತಿದ್ದ ಈಚರ್ ಟೆಂಪೊವೊಂದು ಅಪಘಾತಕ್ಕೀಡಾಗಿ ಮೂವರು ಕಾರ್ಮಿಕರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಪೆರ್ಡೂರು ಸಮೀಪ ನಡೆದಿದೆ.

ಮೃತರನ್ನು ಅಸ್ಸಾಂ ಮೂಲದ ಕಾರ್ಮಿಕರೆಂದು ಗುರುತಿಸಲಾಗಿದೆ. ಅವರ ಮಾಹಿತಿ ಇನ್ನಷ್ಟೆ ಸಿಗಬೇಕಾಗಿದೆ. ಮೇ 1ರಂದು ಉಡುಪಿ ಎಂಜಿಎಂ ಕಾಲೇಜು ಮೈದಾನದಲ್ಲಿ ನಡೆಯುವ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಚಿತ್ರದುರ್ಗದಿಂದ ಪೆಂಡಲ್ ಸಾಗಾಟ ಮಾಡುತ್ತಿದ್ದ ಟೆಂಪೊ ಚಾಲಕನ ನಿರ್ಲಕ್ಷದಿಂದ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಉರುಳಿಬಿದ್ದು ಈ ಅಪಘಾತ ಸಂಭವಿಸಿತೆನ್ನಲಾಗಿದೆ.

ಇದರಿಂದ ಟೆಂಪೋದಲ್ಲಿದ್ದ 10-12 ಕಾರ್ಮಿಕರ ಪೈಕಿ ಓರ್ವ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಆಸ್ಪತ್ರೆ ಸಾಗಿಸುವ ದಾರಿಮಧ್ಯೆ ಮೃತಪಟ್ಟರೆನ್ನಲಾಗಿದೆ. ಉಳಿದವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಹಿರಿಯಡ್ಕ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


Spread the love

Exit mobile version