Home Mangalorean News Kannada News ರಕ್ಷಾ ಸಾವಿನ ತನಿಖೆ ನಡೆಸಲು ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ

ರಕ್ಷಾ ಸಾವಿನ ತನಿಖೆ ನಡೆಸಲು ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ

Spread the love

ರಕ್ಷಾ ಸಾವಿನ ತನಿಖೆ ನಡೆಸಲು ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ

ಉಡುಪಿ: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಶುಕ್ರವಾರ ಮೃತಪಟ್ಟ 26 ವರ್ಷ ಪ್ರಾಯದ ಮಹಿಳೆ ರಕ್ಷಾ ಅವರ ಸಾವಿನ ಕುರಿತು ಸೂಕ್ತ ತನಿಖೆ ನಡೆಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ ಆದೇಶಿಸಿದ್ದಾರೆ.

ಜಿಲ್ಲಾ ಮಟ್ಟದಲ್ಲಿ ತನಿಖೆ ನಡೆಸಲು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಸಮರ್ಪಕ ತನಿಖೆಯನ್ನು ನಡೆಸಿ, ನಾಲ್ಕು ದಿನದಲ್ಲಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಅವರು ಸೂಚಿಸಿದ್ದಾರೆ.


Spread the love

Exit mobile version