ರಾಜ್ಯವನ್ನು ಹೊಸ ದಿಕ್ಕಿನತ್ತ ಕೊಂಡೊಯ್ಯುವ ಬಜೆಟ್ – ಪ್ರಖ್ಯಾತ್ ಶೆಟ್ಟಿ
ಉಡುಪಿ: ಸಿದ್ಧರಾಮಯ್ಯರು ಮಂಡಿಸಿದ ಈ ವರ್ಷದ ಬಜೆಟ್ ರಾಜ್ಯವನ್ನು ಹೊಸ ದಿಕ್ಕಿನತ್ತ ಕೊಂಡೊಯ್ಯಲಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ.
ರಾಜ್ಯ ಸರಕಾರದ ಬಜೆಟ್ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಕೃಷಿ, ಮೀನುಗಾರಿಕೆ, ಉದ್ಯಮ, ಕೈಗಾರಿಕೆ ಸೇರಿದಂತೆ ಎಲ್ಲ ವಲಯಗಳಿಗೆ ಪ್ರೋತ್ಸಾಹ ನೀಡಲಾಗಿದೆ. ರೈತ ಮಹಿಳೆಯರಿಗೆ ಹಸು-ಎಮ್ಮೆ ಖರೀದಿಗೆ ಸಾಲ ಸೌಲಭ್ಯ, ಮತ್ಸ್ಯ ಆಶಾಕಿರಣ ಯೋಜನೆಯಡಿ ಕರಾವಳಿ ಮೀನುಗಾರರ ಪರಿಹಾರ ಮೊತ್ತ 3ಸಾವಿರ ರೂ. ಹೆಚ್ಚಳ, ಬಹುದಿನಗಳ ಮೀನುಗಾರರ ಕನಸಾದ ಸಮುದ್ರ ಅಂಬುಲೆನ್ಸ್ ಕರಾವಳಿಯಲ್ಲಿ ಬಲಿಷ್ಠವಾಗಿರುವ ಸ್ವಸಹಾಯ ಗುಂಪುಗಳಿಗೆ 10 ಕೋಟಿ ರೂ. ಮೀಸಲು ಇನ್ನೂ ಹತ್ತು ಹಲವು ಯೋಜನೆಗಳನ್ನು ಕರಾವಳಿ ಜಿಲ್ಲೆಗಳಿಗೆ ಮುಖ್ಯಮಂತ್ರಿಗಳು ಘೋಷಣೆ ಮಾಡಿರುತ್ತಾರೆ.
ಕರಾವಳಿಯ ಹಿರಿಯ ಪತ್ರಕರ್ತ ರಘುರಾಮ ವಡ್ಡರ್ಸೆ ಹೆಸರಲ್ಲಿ ಪ್ರಶಸ್ತಿ, ಗ್ರಾಮೀಣಪತ್ರಕರ್ತರಿಗೆ ಬಸ್ ಪಾಸ್ ಆರಂಭಿಸಿರುವುದು ಒಳ್ಳೆಯ ಯೋಜನೆಯಾಗಿದೆ. ಒಟ್ಟಾರೆಯಾಗಿ ಬಜೆಟ್ ಆರ್ಥಿಕ ಶಿಸ್ತಿನಿಂದ ಕೂಡಿದ್ದು, ಆಶಾದಾಯಕ ಬಜೆಟ್ ಆಗಿದೆ. ಮುಖ್ಯಮಂತ್ರಿಗಳು ಪ್ರಸಕ್ತ ಸಾಲಿನಲ್ಲಿ ಐದು ಗ್ಯಾರಂಟಿಗಳಿಗೆ 52 ಸಾವಿರ ಕೋಟಿ ಮೀಸಲಿಟ್ಟಿದ್ದು, ಬಡವರ, ದೀನದಲಿತರ, ಅಲ್ಪಸಂಖ್ಯಾತರ ಅಭಿವೃದ್ಧಿ ಬಜೆಟ್ ಮಂಡಿಸಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.