ರಾಜ್ಯ ಸರಕಾರದ ಜನವಿರೋಧಿ ನೀತಿಯ ವಿರುದ್ದ ಕಾಪು ಕಾಂಗ್ರೆಸ್ ವತಿಯಿಂದ ‘ಜನಧ್ವನಿ’ ಪ್ರತಿಭಟನೆ

Spread the love

ರಾಜ್ಯ ಸರಕಾರದ ಜನವಿರೋಧಿ ನೀತಿಯ ವಿರುದ್ದ ಕಾಪು ಕಾಂಗ್ರೆಸ್ ವತಿಯಿಂದ ‘ಜನಧ್ವನಿ’ ಪ್ರತಿಭಟನೆ

ಕಾಪು: ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಭೂಸ್ವಾಧೀನ ಕಾಯ್ದೆ, ಕಾರ್ಮಿಕರ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಜನಧ್ವನಿ ಅಭಿಯಾನದ ಮೂಲಕ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕಾಪು ರಾಜೀವ್ ಭವನದಿಂದ ಮೆರವಣಿಗೆ ಮೂಲಕ ತಾಲೂಕು ಕಚೇರಿಯ ವರೆಗೆ ಮೆರೆವಣಿಗೆಯ ಮೂಲಕ ತೆರಳಿದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಕಾಪು ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ದೇವರಾಜ ಅರಸು ಅವರು ಉಳುವವನೆ ಭೂಮಿಯ ಒಡೆಯ ಕಾಯ್ದೆಜಾರಿಗೆ ತಂದಿದ್ದರು. ಆದರೆ ಈಗ ಇದಕ್ಕೆ ತದ್ವಿರುದ್ಧವಾದ ಕಾಯ್ದೆಯನ್ನು ಬಿಜೆಪಿ ಸರ್ಕಾರ ಜಾರಿಗೆ ತಂದಿದೆ. ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಇಬ್ಬರೂ ಕೂಡ ಉಳುವವರಿಗೆ ಭೂಮಿ ಸಿಗುವ ಕಾನೂ ನು ತಂದುಕೊಟ್ಟವರು. ಜನರ ಕಲ್ಯಾಣಕ್ಕಾಗಿ ಭೂಸುಧಾರಣೆ ಕಾಯ್ದೆ ಜಾರಿಗೆ ತಂದವರು ಆದರೆ ಬಿಜೆಪಿ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡೆಇ ತಂದು ರೈತರಿಗೆ ಅನ್ಯಾಯ ಮಾಡಲು ಹೊರಟಿದೆ. ಜತೆಗೆ ಎಪಿಎಂಸಿ ಕಾಯಿದೆ ತಿದ್ದುಪಡಿ ತಂದಿದ್ದು , ಕೊರೋನಾ ವಿಚಾರದಲ್ಲಿ ವ್ಯಾಪಕವಾದ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿದರು.

ಈ ವೇಳೆ ಕಾಪು ವಲಯದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love