ರಾಮ ಮಂದಿರ ನಿರ್ಮಾಣ ಭೂಮಿ ಪೂಜೆ ; ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಅ4-6 ರ ವರೆಗೆ ಸೆಕ್ಷನ್ 144 ಜಾರಿ

Spread the love

ರಾಮ ಮಂದಿರ ನಿರ್ಮಾಣ ಭೂಮಿ ಪೂಜೆ ; ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಅ4-6 ರ ವರೆಗೆ ಸೆಕ್ಷನ್ 144 ಜಾರಿ

ಮಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ “ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿರುವುದರಿಂದ ಮಂಗಳೂರು ನಗರದಲ್ಲಿ ಮತೀಯ, ರಾಜಕೀಯ ಗಲಭೆಗಳನ್ನು ಮತ್ತು ಸಾರ್ವಜನಿಕ ಪ್ರಾಣ, ಆಸ್ತಿಪಾಸ್ತಿ ಹಾನಿ ಗಳನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಗಸ್ಟ್ 4 ರಾತ್ರಿ 8 ಗಂಟೆಯಿಂದ ಅಗಸ್ಟ್ 6 ಬೆಳಿಗ್ಗೆ 6 ಗಂಟೆಯವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಘಟಕದ ವ್ಯಾಪ್ತಿಯಲ್ಲಿ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ ಕಲಂ: 144 ರನ್ವಯ ನಿರ್ಬಂಧಕ ಆಜ್ಞೆಯನ್ನು ವಿಧಿಸಿ ಮಂಗಳೂರು ನಗರ ಪೊಲೀಸ್ ಕಮೀಷನರ್ ವಿಕಾಶ್ ಕುಮಾರ್ ಅವರು ಆದೇಶ ನೀಡಿದ್ದಾರೆ.

ಅದರಂತೆ ನಿರ್ಬಂಧಕ ಅಜ್ಞೆ ಜ್ಞಾರಿಯಲ್ಲಿರುವ ಸಮಯದಲ್ಲಿ :
1, ಮಂಗಳೂರು ನಗರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವಾಗ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು;

2. ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗಾದೆಗಳು, ಬಂದೂಕುಗಳು, ಚಾಕುಗಳು, ಕೋಲುಗಳು ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು;

3, ಪಟಾಕಿಗಳನ್ನು ಸಿಡಿಸುವುದು, ಯಾವುದೇ ಕಾರಕ ಪಧಾರ್ಥ ಅಥವಾ ಸ್ಫೋಟಕಗಳನ್ನು ಒಯ್ಯುವುದನ್ನು;

4. ಯಾವುದೇ ರೀತಿಯ ಸಾರ್ವಜನಿಕ ಮೆರವಣಿಗೆ, ಪ್ರತಿಭಟನೆ, ಧರಣಿ, ಮುಷ್ಕರ ರಾಸ್ತಾ ರೋಕೊ
ಮುತ್ತಿಗೆ, ಬೈಕ್ ರ್ಯಾಲಿ ಸಮಾರಂಭಗಳನ್ನು ನಡೆಸುವುದನ್ನು;

5. ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು;

6. ವ್ಯಕ್ತಿಗಳ ಅಥವಾ ಅವರ ಶವಗಳ ಅಥವಾ ಆಕೃತಿಗಳ ಅಥವಾ ಪ್ರತಿ ಕೃತಿಗಳ ಪ್ರದರ್ಶನ ಮಾಡುವುದನ್ನು;

7, ಸಭ್ಯತ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಅಥವಾ ಸಾರ್ವಜನಿಕ ಸುವ್ಯವಸ್ಥೆ ಭಾಧೆಯನ್ನುಂಟು ಮಾಡಬಹುದಾದ ಅಥವಾ ರಾಜ್ಯದ ಭದ್ರತೆಯನ್ನು ಕುಗ್ಗಿಸುವ (ಕಡೆಗಣಿಸ ಬಹುದಾದ ಅಥವಾ ಅಪರಾಧವನ್ನು ಮಾಡಲು ಪ್ರಚೋದಿಸಬಹುದು ಬಹಿರಂಗ ಘೋಷಣೆಗಳನ್ನು ಮಾಡುವುದು, ಹಾಡುಗಳನ್ನು ಹಾಡುವುದು, ಸಂಗೀತವನ್ನು ನುಡಿಸುವುದು, ಆವೇಶ ಭರಿತ ಭಾಷಣ ಮಾಡುವುದು, ಇಂಗಿತ ಸೂಚನೆಗಳ ಅಥವಾ ಅಂಕ ನಿರೂಪಣೆಗಳನ್ನು ಉಪಯೋಗ ಮಾಡುವುದು ಮತ್ತು ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿ ಪತ್ರಗಳನ್ನು ಅಥವಾ ಇತರ ಯಾವುದೇ ವಸ್ತು ಅಥವಾ ಪದಾರ್ಥವನ್ನು ತಯಾರಿಸುವುದು, ಪ್ರದರ್ಶಿಸುವುದು ಅಥವಾ ಪ್ರಸಾರ ಮಾಡುವುದನ್ನು ನಿಷೇಧಿಸಿದೆ.

ಈ ನಿರ್ಬಂಧಕಾಜ್ಞೆ ದಿನಾಂಕ 04-08-2020 ರ ರಾತ್ರಿ 8-00 ಗಂಟೆಯಿಂದ ದಿನಾಂಕ: 06-08-2020 ರ ಬೆಳಗ್ಗೆ 06-00 ಗಂಟೆಯ ವರೆಗೆ ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮಾತ್ರ ಜ್ಯಾರಿಯಲ್ಲಿರುತ್ತದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಈ ನಿರ್ಬಂಧಕಾಜ್ಞೆ ಬ್ಯಾಟರಿಯಲ್ಲಿರುವ ಪ್ರದೇಶದಲ್ಲಿ ಸರಕಾರದಿಂದ ಯಾ ಸರಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.


Spread the love