ಲಾಕ್’ಡೌನ್ 4.0: ರಾಜ್ಯದಲ್ಲಿ ಬಸ್, ಆಟೋ ರಿಕ್ಷಾ ಓಡಾಟಕ್ಕೆ ಅವಕಾಶ, ಪ್ರತೀ ಭಾನುವಾರ ಕಂಪ್ಲೀಟ್ ಲಾಕ್ ಡೌನ್

Spread the love

ಲಾಕ್’ಡೌನ್ 4.0: ರಾಜ್ಯದಲ್ಲಿ ಬಸ್, ಆಟೋ ರಿಕ್ಷಾ ಓಡಾಟಕ್ಕೆ ಅವಕಾಶ, ಪ್ರತೀ ಭಾನುವಾರ ಕಂಪ್ಲೀಟ್ ಲಾಕ್ ಡೌನ್

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ನಾಲ್ಕನೇ ಹಂತದ ಲಾಕ್‌ಡೌನ್‌ ಜಾರಿಯಲ್ಲಿದ್ದು, ಕಂಟೈನ್​ಮೆಂಟ್​​ ಝೋನ್​ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕಾನೂನು ಮೀರಿದರೆ ಕ್ರಿಮಿನಲ್​ ಮೊಕದ್ದಮೆ ದಾಖಲಿಸಲಾಗುವುದು. ಜನರ ಓಡಾಟಕ್ಕಾಗಿ ನಾಳೆಯಿಂದ ಬಿಎಂಟಿಸಿ, ಕೆಎಸ್​ಆರ್​ಟಿಸಿ ಸೇರಿದಂತೆ ಎಲ್ಲ ಬಸ್​​ಗಳ ಓಡಾಟಕ್ಕೆ ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್​ಡೌನ್ 4.0ಗೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ. ಅದಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಸಂಪುಟದ ಸದಸ್ಯರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಅವರು ತಿಳಿಸಿದರು.

ಒಂದು ಬಸ್​ನಲ್ಲಿ ಕೇವಲ 30 ಜನರಿಗೆ ಪ್ರಯಾಣ ಮಾಡುವ ಅವಕಾಶ ನೀಡಲಾಗಿದೆ. ಬಸ್‌ನಲ್ಲಿ ಪ್ರಯಾಣಿಸುವವರು ಮಾಸ್ಕ್​ ಅನ್ನು ಕಡ್ಡಾಯವಾಗಿ ಧರಿಸಬೇಕು. ಮಾಸ್ಕ್​ ಹಾಕದೇ ಇದ್ದರೆ ದಂಡ ವಿಧಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಹೊರ ರಾಜ್ಯದಿಂದ ಬರುವವರಿಗೆ ಕ್ವಾರಂಟೈನ್​​ ಮಾಡುವ ನಿರ್ಧಾರ ಮುಂದುವರಿಸಲು ನಿರ್ಧರಿಸಲಾಗಿದೆ. ಬೇರೆ ರಾಜ್ಯದಿಂದ ಅನವಶ್ಯಕವಾಗಿ ಬರಲು ಅವಕಾಶವಿಲ್ಲ ಎಂದು ತಿಳಿಸಿದರು.

ಆಟೋ, ಟ್ಯಾಕ್ಸಿ ಓಡಾಟಕ್ಕೆ ಅನುಮತಿ ನೀಡಲಾಗಿದೆ. ಅವರಿಗೂ ಮಾಸ್ಕ್​ ಕಡ್ಡಾಯಗೊಳಿಸಲಾಗಿದೆ. ನಾಳೆಯಿಂದ ಮಾಲ್​​, ಸಿನಿಮಾ ಥಿಯೇಟರ್, ಹೋಟೆಲ್​ ಬಿಟ್ಟು ಉಳಿದ ಎಲ್ಲ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ರಾಜ್ಯದೊಳಗೆ ಓಡಾಡಲು ರೈಲುಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಹೊರಗಡೆಯಿಂದ ಬರುವ ಟ್ರೇನ್​ಗಳಿಗೆ ಅವಕಾಶ ನೀಡುವುದಿಲ್ಲ ಎಂದು ಯಡಿಯೂರಪ್ಪ ತಿಳಿಸಿದರು.

ಸಲೂನ್​ ಶಾಪ್​ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಭಾನುವಾರ ಇಡೀ ದಿನ ಸಂಪೂರ್ಣ ​ ಲಾಕ್​ಡೌನ್​ ಇರುತ್ತದೆ, ಜನರ ಓಡಾಟಕ್ಕೂ ಅವಕಾಶ ಇರುವುದಿಲ್ಲ ಎಂದರು.

ಬೆಳಗ್ಗೆ 7 ರಿಂದ 9 ಹಾಗೂ ಸಾಯಂಕಾಲ 5 ರಿಂದ 7ಗಂಟೆ ವರೆಗೆ ಎಲ್ಲ ಪಾರ್ಕ್​ಗಳಲ್ಲಿ ಓಡಾಟ ಮಾಡಲು ಅವಕಾಶ ನೀಡಲಾಗಿದೆ. ಬಸ್​​ ಚಾರ್ಜ್​​ಅನ್ನು ಸದ್ಯಕ್ಕೆ ಹೆಚ್ಚಿಸುವುದಿಲ್ಲ. ಈಗ ಆಗಿರುವ ನಷ್ಟವನ್ನು ಸರ್ಕಾರವೇ ತುಂಬಿಕೊಡಲಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಹೊರ ರಾಜ್ಯದಿಂದ ಬರುವವರಿಗೆ ಕ್ವಾರಂಟೈನ್
ಅನಿವಾರ್ಯವಿದ್ದರೆ ಮಾತ್ರ ಹೊರ ರಾಜ್ಯದಿಂದ ಬರಬೇಕು. ಹೊರ ರಾಜ್ಯದಿಂದ ಬರುವವರನ್ನು ಕ್ವಾರಂಟೈನ್ ಮಾಡಲಾಗುತ್ತದೆ. ಚಾಲಕ ಸೇರಿ ಮೂವರು ಮಾತ್ರ ಟ್ಯಾಕ್ಸಿಯಲ್ಲಿ ಪ್ರಯಾಣ ಮಾಡಬಹುದು. ಇನ್ನು ಮೇ.31ರವರೆಗೂ ಗುಜರಾತ್, ಮಹಾರಾಷ್ಟ್ರ, ತಮಿಳುನಾಡು ಹಾಗೂ ಕೇರಳ ರಾಜ್ಯ ಜನತೆಗೆ ರಾಜ್ಯ ಪ್ರವೇಶಿಸಲು ಅವಕಾಶವಿಲ್ಲ.

ಉದ್ಯಾನವನಗಳಲ್ಲಿ ವಾಕಿಂಗ್ ಮಾಡಲು ಅವಕಾಶ
ಉದ್ಯಾನವನಗಳಲ್ಲಿ ವಾಕಿಂಗ್ ಮಾಡಲುವುದಕ್ಕೆ ಅವಕಾಶ ನೀಡಲಾಗಿದ್ದು, ಬೆಳಿಗ್ಗೆ 7 ರಿಂದ 9 ಗಂಟೆ ಹಾಗೂ ಸಂಜೆ 5 ರಿಂದ 7 ಗಂಟೆ ವರೆಗೂ ಅವಕಾಶ ಮಾಡಿಕೊಡಲಾಗಿದೆ. ರಾಜ್ಯದಲ್ಲಿ ಸಲೂನ್ ಗಳನ್ನು ತೆರೆಯುವುದಕ್ಕೂ ಅವಕಾಶ ಕಲ್ಪಿಸಲಾಗಿದೆ.

ಪ್ರತೀ ಭಾನುವಾರ ರಾಜ್ಯ ಕಂಪ್ಲೀಟ್ ಲಾಕ್’ಡೌನ್
ನಾಳೆಯಿಂದ ಮಾಲ್, ಚಿತ್ರಮಂದಿರ, ಹೋಟೆಲ್ ಬಿಟ್ಟು ಎಲ್ಲಾ ಅಂಗಡಿ ಓಪನ್ ಮಾಡಬಹುದು. ಆದರೆ, ಪ್ರತೀ ಭಾನುವಾಕ ರಾಜ್ಯವನ್ನು ಸಂಪೂರ್ಣವಾಗಿ ಲಾಕ್’ಡೌನ್ ಮಾಡಲಾಗುತ್ತದೆ. ಈ ನಡುವೆ ರಾಜ್ಯದಲ್ಲಿ ರೈಲು ಸಂಚಾರಕ್ಕೂ ಅವಕಾಶ ನೀಡಲಾಗಿದೆ.


Spread the love
1 Comment
Inline Feedbacks
View all comments
Joshua
4 years ago

Which are the RED zones in Karnataka