Home Mangalorean News Kannada News ಲೋಕಸಭಾ ಚುನಾವಣೆ: ಉಡುಪಿ-ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತದಾನ ಆರಂಭ

ಲೋಕಸಭಾ ಚುನಾವಣೆ: ಉಡುಪಿ-ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತದಾನ ಆರಂಭ

Spread the love

ಲೋಕಸಭಾ ಚುನಾವಣೆ: ಉಡುಪಿ-ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತದಾನ ಆರಂಭ

ಉಡುಪಿ: ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಬೆಳಿಗ್ಗೆ ಆರಂಭವಾಗಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸೇರಿದಂತೆ ಕರ್ನಾಟಕದ 14 ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದೆ.

ಉಡುಪಿ –ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ, ಬಿಜೆಪಿ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಒಟ್ಟು 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆಯವರು ತಮ್ಮ ಕುಟುಂಬ ವರ್ಗದೊಂದಿಗೆ ಕೊರ್ಗಿ ಬಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 7,68,215 ಪುರುಷ, 8,16,910 ಮಹಿಳೆ ಮತ್ತು 37 ತೃತೀಯ ಲಿಂಗಿ ಸೇರಿದಂತೆ ಒಟ್ಟು 15,85,162 ಮತದಾರರಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 203 ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ 202 ಕ್ರಿಟಿಕಲ್ ಮತಗಟ್ಟೆಗಳಿವೆ. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಒಟ್ಟು 52 ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಇಲ್ಲಿಗೆ ಸೆಂಟರ್ ಆರ್ಮ್ಡ್ ಪೊಲೀಸ್ ಪೋರ್ಸ್ಗಳನ್ನು ನಿಯೋಜಿಸಲಾಗಿದೆ. 459 ಮತಗಟ್ಟೆಗಳಲ್ಲಿ ಮೈಕ್ರೋ ಅಬ್ಸಾರ್ವರ್ಗಳನ್ನು ಮತ್ತು ಸಿಗ್ನಲ್ ಸಿಗದ 18 ಮತಗಟ್ಟೆಗಳಲ್ಲಿ ಚಿತ್ರೀಕರಣ ಮಾಡಲು ವಿಡಿಯೋಗ್ರಾಫರ್ ನಿಯೋಜಿಸಲಾಗಿದೆ. ಚುನಾವಣಾ ಕರ್ತವ್ಯಕ್ಕಾಗಿ ಒಟ್ಟು 4120 ಮಂದಿ ಅಧಿಕಾರಿ ಹಾಗೂ ಸಿಬಂದಿಯನ್ನು ನಿಯೋಜಿಸಲಾಗಿದೆ.

ಮತದಾನದ ಹಿನ್ನೆಲೆ ಯಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದ್ದು, ಚುನಾವಣಾ ಬಂದೋಬಸ್ತ್ಗಾಗಿ ಮೂರು ಎಸ್ಪಿ ಶ್ರೇಣಿಯ ಅಧಿಕಾರಿ ಗಳು, ಆರು ಡಿವೈಎಸ್ಪಿಗಳು, 15 ಪೊಲೀಸ್ ನಿರೀಕ್ಷಕರು, 1501 ಪೊಲೀಸ್ ಸಿಬ್ಬಂದಿ ಮತ್ತು 500 ಮೀಸಲು ಪಡೆಯ ಪೊಲೀಸರನ್ನು ನಿಯೋಜಿಸಲಾಗಿದೆ. ಒಟ್ಟು ನಾಲ್ಕು ಮೀಸಲು ಪೊಲೀಸ್ ಪಡೆಗಳನ್ನು ನೇಮಿಸಲಾಗಿದೆ.


Spread the love

Exit mobile version