ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಡಳಿತಾಧಿಕಾರಿ ನೇಮಕ: ಮುಜರಾಯಿ ಸಚಿವರಿಗೆ ಅಜಿತ್ ಕುಮಾರ್ ಶೆಟ್ಟಿ ಅಭಿನಂದನೆ
ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ವಡ್ಡರ್ಸೆ ಗ್ರಾಮದ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಗೆ ನೂತನ ಆಡಳಿತಾಧಿಕಾರಿಯವರನ್ನು ನೇಮಿಸಿರುವ ರಾಜ್ಯ ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ.
ವಡ್ಡರ್ಸೆ ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವಸ್ಥಾನದ ಆಡಳಿತ ಮಂಡಳಿಯ ಅವಧಿ ಮುಗಿದಿದ್ದು ಈ ಹಿಂದಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ಅವರು ಇವಾಗಲೂ ದೇವಸ್ಥಾನದ ಆದಾಯವನ್ನು ತನ್ನ ಸ್ವಂತಕ್ಕೆ ಉಪಯೋಗ ಮಾಡಿಕೊಳ್ಳುತ್ತಿರುದಾಗಿ ಸ್ಥಳೀಯರು ದೂರು ನೀಡುತ್ತಿದ್ದು ಕೂಡಲೇ ದೇವಸ್ಥಾನಕ್ಕೆ ಆಡಳಿತಾಧಿಕಾರಿ ನೇಮಿಸುವಂತೆ ಅಜಿತ್ ಕುಮಾರ್ ಶೆಟ್ಟಿ ಮನವಿ ಸಲ್ಲಿಸಿದ್ದರು
ಅವರ ಮನವಿಯನ್ನು ಪುರಸ್ಕರಿಸಿ ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ನೂತನ ಆಡಳಿತ ಅಧಿಕಾರಿಯಾಗಿ ಕಂದಾಯ ನಿರೀಕ್ಷಕರು ಕೋಟ ಹೋಬಳಿ ಬ್ರಹ್ಮಾವರ ತಾಲೂಕು ಇವರನ್ನ ನೇಮಕ ಮಾಡಿರುವುದಕ್ಕಾಗಿ ಅಜಿತ್ ಕುಮಾರ್ ಶೆಟ್ಟಿ ಸಚಿವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ ಧಾರ್ಮಿಕ ಭಾವನೆಗಳಿಗೆ ಧಾರ್ಮಿಕ ಸಂಸ್ಥೆಗಳ ಆಡಳಿತದಲ್ಲಿ ದೇವಸ್ಥಾನದಲ್ಲಿ ದುರುಪಯೋಗ ನಡೆಸಿದರೆ ಪಕ್ಷಾತೀತವಾಗಿ ಹೋರಾಟ ಮಾಡುವುದು ಅನಿವಾರ್ಯವಾದಿತು ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.