ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ

Spread the love

ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ

ಮಂಗಳೂರು : ಮಂಗಳೂರು ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಗಾಂಜಾ ಮತ್ತು ಮಾರಾಟ ಮಾಡಲು ಉಪಯೋಗಿಸಿದ ದ್ವಿಚಕ್ರ ವಾಹನ ಸಮೇತ ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಬಂಧಿತರನ್ನು ಬಂಟ್ವಾಳ ಕುಚ್ಚಿನಡ್ಕ ನಿವಾಸಿ ಮೊಹಮ್ಮದ್ ಅಶ್ರಫ್ (37), ಜಾಫರ್ ಶರೀಫ್ (32) ಎಂದು ಗುರುತಿಸಲಾಗಿದೆ

ಅಗೋಸ್ತ್ 9 ರಂದು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಡಿಪು ಜಂಕ್ಷನ್ ಬಳಿಯಿರುವ ಮಂಗಳಾ ಬಾರ್ ಎದುರುಗಡೆಯ ರಸ್ತೆಯ ಬದಿಯಲ್ಲಿ ಇಬ್ಬರು ಯುವಕರು ಕೆಎ-19-ಇಎಫ್-6858 ಬಜಾಜ್ ಪ್ಲಾಟಿನಾ ಬೈಕ್ ನಲ್ಲಿ ವಿದ್ಯಾರ್ಥಿಗಳಿಗೆ  ಹಾಗೂ ಸಾರ್ವಜನಿಕರಿಗೆ  ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದುಕೊಂಡು ಅವರಿಂದ ಒಟ್ಟು 500 ಗ್ರಾಂ ಗಾಂಜಾ,  ಕೆಎ-19-ಇಎಫ್-6858   ಬಜಾಜ್ ಪ್ಲಾಟಿನ ದ್ವಿಚಕ್ರ ವಾಹನ, ಹಾಗೂ  2 ಮೊಬೈಲ್ ಫೋನ್,ಗಳು, ನಗದು ಹಣ ರೂ. 580/-,ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಗಾಂಜಾ, ಬೈಕ್ ಹಾಗೂ ಮೊಬೈಲ್ ಫೋನ್ ಗಳ ಒಟ್ಟು ಮೌಲ್ಯ ರೂ. 48,080/- ಆಗಿರುತ್ತದೆ. ಈ ಗಾಂಜಾವನ್ನು ಆರೋಪಿಗಳು ಕೋಲಾರ ಕಡೆಯಿಂದ ಖರೀದಿ ಮಾಡಿ ಮಂಗಳೂರು ನಗರದಲ್ಲಿ ಮಾರಾಟ ಮಾಡಲು ತಂದಿರುವುದಾಗಿದೆ. ಆರೋಪಿಗಳ  ಪೈಕಿ ಅಶ್ರಫ್ ಎಂಬಾತನ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿತ್ತು. ಇನ್ನೋರ್ವ ಆರೋಪಿ ಜಾಫರ್ ಶರೀಫ್ ಎಂಬಾನ ವಿರುದ್ಧ ಈ ಹಿಂದೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಗ್ಯಾಸ್ ಸಿಲಿಂಡರ್ ಗಳನ್ನು ಕಳವು ಗೈದ ಪ್ರಕರಣ ದಾಖಲಾಗಿರುತ್ತದೆ. ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಪೊಲೀಸ್ ಕಮೀಷನರ್ ಟಿ. ಆರ್ ಸುರೇಶ್ ರವರ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿ.ಸಿ.ಪಿ  ಕೆ.ಎಂ. ಶಾಂತರಾಜು, ಹಾಗೂ ಎಸಿಪಿ ಸಿಸಿಆರ್ ಬಿ ವೆಲೆಂಟೈನ್ ಡಿ ಸೋಜಾ  ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಸುನೀಲ್ ವೈ ನಾಯ್ಕ್ ಮತ್ತು ಪಿ.ಎಸ್.ಐ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿಗಳು  ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.


Spread the love