Home Mangalorean News Kannada News ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ವಿದ್ಯಾರ್ಜನೆಗೆ ಪೂರಕ- ಮುಕುಂದ್ ಕಾಮತ್

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ವಿದ್ಯಾರ್ಜನೆಗೆ ಪೂರಕ- ಮುಕುಂದ್ ಕಾಮತ್

Spread the love

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ವಿದ್ಯಾರ್ಜನೆಗೆ ಪೂರಕ- ಮುಕುಂದ್ ಕಾಮತ್

ಮಂಗಳೂರು: ಕ್ರೀಡೆಯು ವಿದಾರ್ಥಿಗಳ ಜೀವನದಲ್ಲಿ ಮಹತ್ವವಾದ ಅಂಗ. ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಕ್ರೀಡೆಯಲ್ಲೂ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಐಡಿಯಲ್ ಐಸ್‍ಕ್ರೀಮ್ ಸಂಸ್ಥೆಯ ಆಡಳಿತ ನಿರ್ದೇಶಕರಾದ ಮುಕುಂದ್ ಕಾಮತ್ ಅವರು ಹೇಳಿದರು.

ಅವರು ಮಂಗಳೂರು ಮಂಗಳ ಕ್ರೀಡಾಂಗಣದಲ್ಲಿ ನಡೆದ ಮಂಗಳೂರಿನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ – 2016 ಉದ್ಘಾಟಿಸಿ ಮಾತನಾಡಿದರು.

image002expert-college-sports-meet

ಅವರು ಮಾತನಾಡುತ್ತ ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಗೆ ಕ್ರೀಡಾಸ್ಪೂರ್ತಿ ನೀಡುವ ಮೂಲಕ ಆರೋಗ್ಯವಂತ ವಿದ್ಯಾರ್ಥಿಗಳು ಮಾತ್ರ ಉತ್ಕೃಷ್ಟಮಟ್ಟದ ಅಂಕವನ್ನು ಪಡೆದು ಸಾಧನೆ ಮಾಡಲು ಸಾಧ್ಯ ಈ ನಿಟ್ಟಿನಲ್ಲಿ ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆ ತನ್ನನ್ನು ತೊಡಗಿಸಿಕೊಂಡಿದೆ. ಕ್ರೀಡೆಯಲ್ಲಿ ಇಚ್ಚಾಶಕ್ತಿಯ ಜತೆಯಲ್ಲಿ ಪ್ರಯತ್ನಶೀಲ ಮನೋಭಾವ ಕೂಡ ಮುಖ್ಯ. ಆಗ ತನ್ನ ಗುರಿಯನ್ನು ಮುಟ್ಟಬಹುದು ನಮ್ಮ ಬದುಕಿನ ಪ್ರತಿಹಂತದಲ್ಲೂ ಕೂಡ ಶಿಸ್ತು ಮತ್ತು ಪರಿಶ್ರಮ ಮುಖ್ಯ. ಯಾವುದೇ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರು ಅಲ್ಲಿ ನಮ್ಮ ಸಮರ್ಪಣಭಾವ, ಶ್ರದ್ಧೆ, ಆತ್ಮವಿಶ್ವಾಸ, ಶಿಸ್ತು ಮುಖ್ಯ. ಆಗ ಯಶಸ್ಸನ್ನು ಕಾಣಲು ಸಾಧ್ಯ ಎಂದು ಹೇಳಿದರು.ವಿದ್ಯಾರ್ಥಿಗಳು ವಿದ್ಯಾರ್ಜನೆ ಸಮಯದಲ್ಲಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸಧೃಡರಾಗಲು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ರಾಜ್ಯ, ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ ಪದಕಗಳನ್ನು ಗೆಲ್ಲಬೇಕೆಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪ್ರೋ. ನರೇಂದ್ರ .ಎಲ್. ನಾಯಕ್‍ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಉಷಾಪ್ರಭಾ.ಎನ್.ನಾಯಕ್, ಕಾಲೇಜಿನ ಹಳೆ ವಿದ್ಯಾರ್ಥಿಯಾದ ಅಂಕುಶ್ .ಎನ್.ನಾಯಕ್, ಯೋಗ ಗುರು ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ, ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಪ್ರದೀಪ್ ಕುಮಾರ್, ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ರಾಮಚಂದ್ರ ಭಟ್, ಕ್ರೀಡಾ ಸಂಯೋಜಕರಾದ ಪ್ರಮೋದ್ ಕಿಣಿ ಹಾಗು ಇನ್ನಿತರರು ಉಪಸ್ಥಿತರಿದ್ದರು. ಇಂಗ್ಲೀಷ್ ವಿಭಾಗ ಉಪನ್ಯಾಸಕಿ ಝೀಟಾ ಡಿ’ಸೋಜ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

.


Spread the love

Exit mobile version