ವಿದ್ಯಾವಂತ-ಪ್ರಜ್ಞಾವಂತ ಮತದಾರರು ಮತ ನೀಡುವಂತೆ ಡಾ.ಧನಂಜಯ ಸರ್ಜಿ ಮನವಿ

Spread the love

ವಿದ್ಯಾವಂತ-ಪ್ರಜ್ಞಾವಂತ ಮತದಾರರು ಮತ ನೀಡುವಂತೆ ಡಾ.ಧನಂಜಯ ಸರ್ಜಿ ಮನವಿ

ಶಿವಮೊಗ್ಗ : ಇದೇ ಜೂನ್ 3 ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ನಾನು ಬಿಜೆಪಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುತ್ತಿದ್ದು, ವಿದ್ಯಾವಂತ-ಪ್ರಜ್ಞಾವಂತ ಮತದಾರರು ಮತ ನೀಡಿ ಅಭೂತ ಪೂರ್ವ ಗೆಲುವಿಗೆ ಕಾರಣರಾಗಬೇಕು ಎಂದು ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮನವಿ ಮಾಡಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ಶನಿವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ವೈದ್ಯ ಶಿಕ್ಷಣ ಮುಗಿದ ತಕ್ಷಣ ನಾನು ಸರಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ, ನಂತರ ಚಿಕ್ಕದಾಗಿ ಒಂದು ಕ್ಲಿನಿಕ್ ಆರಂಭಿಸಿದ್ದು, ಇದೀಗ 1000 ಸಿಬ್ಬಂದಿ ಹಾಗೂ 100 ವೈದ್ಯರು ಆಸ್ಪತ್ರೆಯಲ್ಲಿ ಸೇವೆಸಲ್ಲಿಸುತ್ತಿದ್ದಾರೆ, ವಿವಿಧ ಹಂತಗಳಲ್ಲಿ ಪದವೀದರರ ಸಮಸ್ಯೆಗಳನ್ನು ಹತ್ತಿರದಿಂದ ಅರಿತುಕೊಂಡಿದ್ದೇನೆ, ನೈರುತ್ಯ ಪದವೀಧರ ಕ್ಷೇತ್ರವು 14 ಮೆಡಿಕಲ್ ಕಾಲೇಜು, 30 ಎಂಜಿನಿಯರಿಂಗ್ ಕಾಲೇಜು, 100 ಕ್ಕಿಂತ ಹೆಚ್ಚು ದೊಡ್ಡ ದೊಡ್ಡ ವಿದ್ಯಾಸ್ಥೆಗಳನ್ನು ಹೊಂದಿದ ಸುಶಿಕ್ಷಿತರ ಕ್ಷೇತ್ರ. ಈ ಕ್ಷೇತ್ರವು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉಡುಪಿ, ಮಂಗಳೂರು, ದಕ್ಷಿಣ ಕನ್ನಡ ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ, ನ್ಯಾಮತಿ, ಚನ್ನಗಿರಿ ತಾಲ್ಲೂಕುಗಳನ್ನು ಒಳಗೊಂಡಿದೆ, ಕ್ಷೇತ್ರದಲ್ಲಿ 85 ಸಾವಿರ ಮತದಾರರಿದ್ದು, ಈ ಪೈಕಿ ಶಿವಮೊಗ್ಗ ಜಿಲ್ಲೆಯಲ್ಲಿ 27 ಸಾವಿರ ಮತದಾರರಿದ್ದಾರೆ, ನನ್ನ ಗೆಲುವಿಗಾಗಿ ಪಕ್ಷದ ನಿಷ್ಟಾವಂತ ಕಾರ್ಯಕರ್ತರು ಗೆಲುವಿಗಾಗಿ ಶ್ರಮಿಸಲಿದ್ದಾರೆ ಎಂದು ಹೇಳಿದರು.
10 ನೇ ವಯಸ್ಸಿನಿಂದ ಆರ್ ಎಸ್ ಎಸ್ ಸ್ವಯಂ ಸೇವಕನಾಗಿ ಸೇವೆ ಸಲ್ಲಿಸಿದ್ದೇನೆ, ಐಟಿಸಿ, ಒಟಿಸಿ ಮುಗಿಸಿ ಮುಖ್ಯ ಶಿಕ್ಷಕನಾಗಿ ಸೇವೆ ಸಲ್ಲಿಸಿದ್ದು, ವೈದ್ಯ ವೃತ್ತಿಯೊಂದಿಗೆ ಸಂಘದ ಅನೇಕ ಜವಾಬ್ದಾರಿಗಳನ್ನು ನಿರ್ವಹಸಿದ್ದೇನೆ, ವಿಕಾಸ ಟ್ರಸ್ಟ್ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ. ಮುನ್ನ ವಿಕಾಸ ಟ್ರಸ್ಟ್ ಗೆ ರಾಜೀನಾಮೆ ಸಲ್ಲಿಸಿ, ಕಳೆದ ಎರಡು ವರ್ಷಗಳ ಹಿಂದೆ ಪಕ್ಷಕ್ಕೆ ಸೇರ್ಪಡೆಗೂಂಡು ಬಿಜೆಪಿಯಲ್ಲೀಗ ಜಿಲ್ಲಾ ಉಪ[ಧ್ಯಕ್ಷನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಪಕ್ಷದ ಹಿರಿಯರು ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ್ದು, ಅವರೆಲ್ಲರಿಗೂ ಅನಂತ ಧನ್ಯವಾದಗಳು, ಈ ಚುನಾವಣೆಯಲ್ಲಿ ತಮ್ಮೆಲ್ಲರ ಸಹಕಾರ, ಬೆಂಬಲದೊಂದಿಗೆ ಗೆಲುವು ಸಾಧಿಸಿ ಪದವೀದರರ ಸಮಸ್ಯೆಗಳಿಗೆ ಪ್ರಾಮಣಿಕವಾಗಿ ಸ್ಪಂದಿಸುವೆ ಎಂದು ಭರವಸೆ ನೀಡಿದರು.

ಶಾಸಕ ಎಸ್.ಎನ್. ಚನ್ನ ಬಸಪ್ಪ,ಮಾತನಾಡಿ, ಪಕ್ಷದ ಹಿರಿಯರು ತೀರ್ಮಾನ ಕೈಗೊಂಡು ಡಾ.ಧನಂಜಯ ಸರ್ಜಿ ಅವರಿಗೆ ಸ್ಪರ್ಧೆಗೆ ಅವಕಾಶ ನೀಡಿದ್ದಾರೆ,ಎಲ್ಲ ಕಾರ್ಯಕರ್ತರು ಸೇರಿ ಅವರ ಗೆಲುವಿಗೆ ಶ್ರಮಿಸುತ್ತೇವೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ರಾಜ್ಯ ಸಂಚಾಕರಾದ ಎಸ್.ದತ್ತಾತ್ರಿ, ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್, ಮಾಜಿ ಸೂಡಾ ಅಧ್ಯಕ್ಷರಾದ ನಾಗರಾಜ್ ಮತ್ತಿತರರು ಹಾಜರಿದ್ದರು.


Spread the love