ವಿಧಾನ ಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

Spread the love

ವಿಧಾನ ಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

ಮಂಗಳೂರು: ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗುರುವಾರ ಬೆಳಗ್ಗೆ ನಾಮಪತ್ರ ಸಲ್ಲಿಸಿದರು.

ದ.ಕ. ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಚುನಾವಣಾಧಿಕಾರಿಗಳೂ ಆಗಿರುವ ದಕ ಜಿಲ್ಲಾಧಿಕಾರಿ ಮುಲ್ಲೈ ಮಹಿಲನ್ ಅವರಿಗೆ  ರಾಜು ಪೂಜಾರಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಮಂಜುನಾಥ ಭಂಡಾರಿ ಮತ್ತು ಐವನ್ ಡಿಸೋಜ, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವರಾದ ಬಿ.ರಮಾನಾಥ ರೈ, ಜಯಪ್ರಕಾಶ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.


Spread the love
Subscribe
Notify of

0 Comments
Inline Feedbacks
View all comments