Home Mangalorean News Kannada News ವಿನಾಯಕ ಪಾಂಡುರಂಗ ಬಾಳಿಗ ಕೊಲೆ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

ವಿನಾಯಕ ಪಾಂಡುರಂಗ ಬಾಳಿಗ ಕೊಲೆ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Spread the love

ಮಂಗಳೂರು: ನಗರದ ಬೆಸೆಂಟ್ ಕಾಲೇಜಿನ ಬಳಿಯಲ್ಲಿ ಮಾರ್ಚ್ 21 ರಂದು ವಿನಾಯಕ ಪಾಂಡುರಂಗ ಬಾಳಿಗ ಎಂಬವರ ಕೊಲೆ ನಡೆಸಿದ ಆರೋಪಿಗಳ ಪೈಕಿ ಈ ಕೆಳಗಿನ ಇಬ್ಬರನ್ನು ಬಂಧಿಸುವಲ್ಲಿ ಮಂಗಳೂರು ನಗರ ಪೊಲೀಸರು ಯಶಸ್ವಿಯಾಗಿರುತ್ತಾರೆ.

image01police-baliga-3-20160327-001

ಬಂಧಿತರನ್ನು ಕಾವೂರು ನಿವಾಸಿ ವಿನಿತ್ ಪೂಜಾರಿ (26) ಹಾಗು ಶಕ್ತಿನಗರ ನಿವಾಸಿ ನಿಶಿತ್ ದೇವಾಡಿಗ (23) ಎಂದು ಗುರುತಿಸಲಾಗಿದೆ.

ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದ ನಗರ ಪೋಲಿಸ್ ಆಯುಕ್ತ ಚಂದ್ರಶೇಖರ್ ಅವರು ಮಾರ್ಚ್ 21 ರಂದು ವಿನಾಯಕ ಪಾಂಡುರಂಗ ಬಾಳಿಗರವರು ಪ್ರತೀ ದಿನದಂತೆ ವೆಂಕಟರಮಣ ದೇವಸ್ಥಾನಕ್ಕೆ ಹೋಗಲು ತನ್ನ ಸ್ಕೂಟರ್ ನಲ್ಲಿ ಮನೆಯಿಂದ ಹೊರಟು ಸುಮಾರು 75 ಮೀಟರ್ ದೂರ ಹೋಗುವಷ್ಟರಲ್ಲಿ ವಿನಾಯಕ ಪಾಂಡುರಂಗ ಬಾಳಿಗರನ್ನು ತಡೆದು ನಿಲ್ಲಿಸಿದ ಅಪರಿಚಿತ ವ್ಯಕ್ತಿಗಳು ಅವರನ್ನು ತಲವಾರಿನಿಂದ ಕಡಿದು, ಬಂದ ಬೈಕ್ ನಲ್ಲಿ ಪರಾರಿಯಾಗಿದ್ದು, ಇದರಿಂದ ಗಂಭೀರ ಗಾಯಗೊಂಡ ವಿನಾಯಕ ಪಾಂಡುರಂಗ ಬಾಳಿಗರನ್ನು ಜ್ಯೋತಿಯ ಕೆ.ಎಂ.ಸಿ ಆಸ್ಪತ್ರೆಗೆ ಚಿಕಿತ್ಸೆಗೆಂದು ತಲುಪಿಸಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ವಿನಾಯಕ ಪಾಂಡುರಂಗ ಬಾಳಿಗರವರು ಮೃತಪಟ್ಟಿರುವುದಾಗಿ ತಿಳಿಸಿದರು. ಈ ಪೈಕಿ ಕೊಲೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾದ ವಿನಿತ್ ಪೂಜಾರಿ ಮತ್ತು ನಿಶಿತ್ ದೇವಾಡಿಗ ರವರನ್ನು ದಿನಾಂಕ 27-03-2016 ರಂದು ಬೆಳಿಗ್ಗೆ ಬಿ.ಸಿ.ರೋಡ್ ರೈಲ್ವೆ ನಿಲ್ದಾಣದ ಬಳಿಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುತ್ತಾರೆ.

ಈ ಕೊಲೆ ಪ್ರಕರಣವನ್ನು ಭೇದಿಸಲು ಮಂಗಳೂರು ನಗರ ಕೇಂದ್ರ ಉಪ-ವಿಭಾಗದ ಎ.ಸಿ.ಪಿ ತಿಲಕ್ ಚಂದ್ರ ಮತ್ತು ಇನ್ಸ್ ಪೆಕ್ಟರ್ ರವರಾದ ವೆಲೆಂಟೈನ್ ಡಿ’ಸೋಜ, ಶಾಂತರಾಮ, ರಾಜೇಶ್, ರವೀಶ್ ನಾಯಕ್, ಮಾರುತಿ ನಾಯಕ್ ಮತ್ತು ಪಿಎಸ್ಐ ಶ್ಯಾಮಸುಂದರ್ ರವರುಗಳನ್ನೊಳಗೊಂಡ ತಂಡಗಳನ್ನು ರಚಿಸಲಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾದ ಉಳಿದ ಆರೋಪಿಗಳ ಪತ್ತೆ ಕಾರ್ಯ ಜ್ಯಾರಿಯಲ್ಲಿದೆ.


Spread the love

Exit mobile version