Spread the love
ವಿಮಾನ, ರೈಲು ಪ್ರಯಾಣಿಕರು ಆರೋಗ್ಯ ಸೇತು ಆ್ಯಪ್ ಹೊಂದಿರೋದು ಕಡ್ಡಾಯವಲ್ಲ
ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಸಂಪರ್ಕಗಳನ್ನು ಪತ್ತೆ ಹಚ್ಚಲು ರೂಪಿಸಲಾಗಿರುವ ‘ಆರೋಗ್ಯ ಸೇತು’ ಮೊಬೈಲ್ ಆ್ಯಪ್ ಅನ್ನು ವಿಮಾನ ಮತ್ತು ರೈಲು ಪ್ರಯಾಣಿಕರು ಅಳವಡಿಸಿಕೊಳ್ಳುವುದು ಕಡ್ಡಾಯವಲ್ಲ ಎಂದು ಕೇಂದ್ರ ಸರಕಾರ ಹೈಕೋರ್ಟ್ಗೆ ಸ್ಪಷ್ಟಪಡಿಸಿದೆ.
ಡಿಜಿಟಲ್ ವಲಯದಲ್ಲಿ ನಾಗರಿಕರ ಹಕ್ಕುಗಳ ರಕ್ಷಣೆಗೆ ಹೋರಾಟ ಮಾಡುತ್ತಿರುವ ಬೆಂಗಳೂರಿನ ಅನಿರ್ವ ಎ. ಅರವಿಂದ್ ಸಲ್ಲಿಸಿದ್ದ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ.ಇ.ಎಸ್. ಇಂದಿರೇಶ್ ಅವರಿದ್ದ ವಿಭಾಗೀಯ ಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.
ಈ ಬಗ್ಗೆ ಸ್ಪಷ್ಟನೆ ನೀಡಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂ.ಬಿ. ನರಗುಂದ ”ವಿಮಾನ ಮತ್ತು ರೈಲು ಪ್ರಯಾಣಿಕರಿಗೆ ಆರೋಗ್ಯ ಸೇತು ಮೊಬೈಲ್ ಆ್ಯಪ್ ಹಾಕಿಕೊಳ್ಳುವುದನ್ನು ಕಡ್ಡಾಯಗೊಳಿಸಿಲ್ಲ. ಅದು ಐಚ್ಛಿಕವಾಗಿದೆ. ಆ್ಯಪ್ ಬಳಸುವಂತೆ ಸಲಹೆಯಷ್ಟೇ ನೀಡಲಾಗಿದೆ” ಎಂದು ನ್ಯಾಯಾಲಯದ ಗಮನಕ್ಕೆ ತಂದರು.
Spread the love