ವಿಶ್ವ ಕೊಂಕಣಿ ಕೇಂದ್ರ ‘ಕ್ಷಮತಾ ಅಕಾಡೆಮಿ’ – ನಾಲ್ಕನೇ ಶಿಬಿರ ಸಮಾರೋಪ ಸಮಾರಂಭ
ವಿಶ್ವ ಕೊಂಕಣಿ ವಿದ್ಯಾರ್ಥಿವೇತನನಿಧಿ ವತಿಯಿಂದ ಇಂಜಿನಿಯರಿಂಗ ಮತ್ತು ಮೆಡಿಕಲ್ ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನವನ್ನು ನೀಡುತ್ತದೆ. ಹಾಗೆಯೇ ವಿಶ್ವ ಕೊಂಕಣಿ ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳಿಗೆ “ಕ್ಷಮತಾ ಅಕಾಡೆಮಿ” ಯೋಜನೆಯಡಿಯಲ್ಲಿ ತರಬೇತಿ ಶಿಬಿರಗಳನ್ನು ಏರ್ಪಡಿಸುತ್ತದೆ. ಈ ಸಾಲಿನ “ಕ್ಷಮತಾ ಅಕಾಡೆಮಿ” ನಾಲ್ಕನೇ ಶಿಬಿರದ ಸಮಾರೋಪ ಸಮಾರಂಭ ದಿ. 18-07-2019 ರಂದು ವಿಶ್ವ ಕೊಂಕಣಿ ಕೇಂದ್ರದಲ್ಲಿ ಜರುಗಿತು.
ಮುಖ್ಯ ಅತಿಥಿಗಳಾಗಿ ಸಂತ ಅಲೋಷಿಯಸ್ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಮೈಸೂರು ವಿಶ್ವ ವಿದ್ಯಾನಿಲಯದ ಬಯೋಕೆಮೆಸ್ಟ್ರಿ ಅಧ್ಯಯನ ವಿಭಾಗದ ನಿವೃತ್ತ ಪ್ರೊ. ಕ್ಲೆಟಸ್ ಜೊಸೆಫ್ ಮೈಕಲ್ ಡಿಸೋಜಾ ಆಗಮಿಸಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಉತ್ತಮವಾದ ಸಲಹೆಗಳನ್ನು ನೀಡಿದರು.
ವಿಶ್ವ ಕೊಂಕಣಿ ಕೇಂದ್ರ ಅಧ್ಯಕ್ಷ ಬಸ್ತಿ ವಾಮನ ಶೆಣೈ ಅಧ್ಯಕ್ಷತೆ ವಹಿಸಿ “ಕ್ಷಮತಾ” ಶಿಬಿರದ ಸದುಪಯೋಗ ಮನವರಿಕೆ ಮಾಡಿಸಿದರು. ಹೆಸರಾಂತ ಕೊಂಕಣಿ ಕವಿ ಶ್ರೀ ಮೆಲ್ವಿನ್ ರೊಡ್ರಿಗಸ್ ಮತ್ತು ವಿಶ್ವ ಕೊಂಕಣಿ ಭಾಷಾ ಸಂಸ್ಥಾನ ನಿರ್ದೇಶಕ ಶ್ರೀ ಗುರುದತ್ತ ಬಂಟ್ವಾಳಕಾರ ಉಪಸ್ಥಿತರಿದ್ದರು. ಶಿಬಿರಾರ್ಥಿಗಳು ಶಿಬಿರದಲ್ಲಿ ತಾವು ಪಡೆದ ಅನುಭವಗಳನ್ನು ಮತ್ತು ನಡೆದ ವಿವಿಧ ಚಟುವಟಿಕೆಗಳ ಬಗ್ಗೆ ತಿಳಿಸಿದರು.