ವೆನ್ಲಾಕ್ ಶಸ್ತ್ರ ಚಿಕಿತ್ಸಕಿ ಡಾ. ರಾಜೇಶ್ವರಿ ದೇವಿಗೆ ವರ್ಗಾವಣೆ
ಮಂಗಳೂರು : ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಶಸ್ತ್ರಚಿಕಿತ್ಸಕಿ ಡಾ. ರಾಜೇಶ್ವರಿ ದೇವಿ ಅವರನ್ನು ವರ್ಗಾಯಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಅವರ ಸ್ಥಾನಕ್ಕೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಸದಾಶಿವ ಅವರನ್ನು ನಿಯುಕ್ತಿಗೊಳಿಸಲಾಗಿದೆ. ವರ್ಗಾವಣೆಗೊಂಡ ರಾಜೇಶ್ವರಿ ದೇವಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಹುದ್ದೆ ವಹಿಸಲಾಗಿದೆ