ಶೋಭಾ, ರಘುಪತಿ ಭಟ್ ಸಹಿತ ಮೂವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ
ಉಡುಪಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಮತ್ತು ಉಡುಪಿ ಶಾಸಕ ರಘುಪತಿ ಭಟ್ ಹಾಗೂ ಉಡುಪಿ ಜಿಪಂ ಸದಸ್ಯ ಮಾರಾಳಿ ಪ್ರತಾಪ್ ಹೆಗ್ಡೆ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾರ್ಚ್ 30 ರಂದು 120 ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಆರೂರು, ಕೆಂಜೂರು, ನೀಲಾವರ, ಉಪ್ಪೂರು ಹಾಗೂ ಹಾವಂಜೆ ಗ್ರಾಮಗಳಲ್ಲಿ 15 ಉಡುಪಿ-ಚಿಕ್ಕಮಗಳೂರು ಲೋಕ ಸಭಾ ಕೇತ್ರದ ಬಿ.ಜೆ.ಪಿ. ಅಭ್ಯರ್ಥಿ ಶೋಭಾ ಕರಂದ್ಲಾಜೆ ಮತ್ತು ಉಡುಪಿ ವಿಧಾನ ಸಭಾ ಕ್ಷೇತ್ರದ ಹಾಲಿ ಶಾಸಕರಾದ ರಘುಪತಿ ಭಟ್ ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮಾರಾಳಿ ಪ್ರತಾಪ್ ಹೆಗ್ಡೆ ಇವರು ರಾಜಕೀಯ ಪಕ್ಷ ಮತ್ತು ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಲು ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೇ, ರಾಜಕೀಯ ಪ್ರಚಾರ ಕಾರ್ಯಕ್ರಮದಲ್ಲಿ ಧ್ವನಿವರ್ಧಕವನ್ನು ಬಳಸಿ ಚುನಾವಣೆ ಸಭೆ ನಡೆಸಿ, ಮತದಾರರ ಮೇಲೆ ಪ್ರಭಾವ ಬೀರಿ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದಾಗಿ ಮಹೇಶ್ ಕೆ.ಜಿ, ಸಹಾಯಕ ಸಂಖ್ಯಾ ಸಂಗ್ರಹಣಾಧಿಕಾರಿ 15 ಉಡುಪಿ ಚಿಕ್ಕಮಗಳೂರು ಲೋಕ ಸಭಾ ಕೇತ್ರ ಇವರು ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 51/2019 ಕಲಂ: 171(F), 171(H), 34 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.