Home Mangalorean News Kannada News ಶ್ರೀವಡಭಾಂಡ ಬಲರಾಮ ದೇವಸ್ಥಾನ: ಹಸಿರು ಹೊರೆಕಾಣಿಕೆ ಮೆರವಣಿಗೆ

ಶ್ರೀವಡಭಾಂಡ ಬಲರಾಮ ದೇವಸ್ಥಾನ: ಹಸಿರು ಹೊರೆಕಾಣಿಕೆ ಮೆರವಣಿಗೆ

Spread the love

ಶ್ರೀವಡಭಾಂಡ ಬಲರಾಮ ದೇವಸ್ಥಾನ: ಹಸಿರು ಹೊರೆಕಾಣಿಕೆ ಮೆರವಣಿಗೆ
 

ಮಲ್ಪೆ: ಶ್ರೀವಡಭಾಂಡ ಬಲರಾಮ ದೇವಸ್ಥಾನದ ಪುನಃ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಮಂಗಳವಾರ ಹಸಿರು ಹೊರೆ ಕಾಣಿಕೆ ಮೆರವಣಿಗೆಯು ಜರಗಿತು.

ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪಲಿಮಾರು ಮಠದ ಶ್ರೀವಿದ್ಯಾಧೀಶ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿದರು.

ಕೊಡವೂರು ದೇಗುಲದಿಂದ ಹೊರಟ ಮೆರವಣಿಗೆ ಸಿಟಿಜನ್ ಸರ್ಕಲ್ ಮಾರ್ಗವಾಗಿ ಶ್ರೀವಡಭಾಂಡ ಬಲರಾಮ ದೇವಸ್ಥಾನಕ್ಕೆ ಸಾಗಿ ಬಂಂತು. ಶಾಸಕ ಯಶ್ಪಾಲ್ ಸುವರ್ಣ ವಿವಿಧ ಟ್ಯಾಬ್ಲೋಗಳಿಗೆ ಚಾಲನೆ ನೀಡಿದರು.

ದೇವಸ್ಥಾನದ ಪ್ರಧಾನ ತಂತ್ರಿ ಬ್ರಹ್ಮಶ್ರೀ ಸುಬ್ರಹ್ಮಣ್ಯ ತಂತ್ರಿ. ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ಶ್ರೀಶ ಭಟ್ ಕಡೆಕಾರ್, ಅಧ್ಯಕ್ಷ ನಾಗರಾಜ್ ಮೂಲಿಗಾರ್, ಪ್ರಧಾನ ಕಾರ್ಯದರ್ಶಿ ಶಶಿಧರ ಎಂ. ಅಮೀನ್, ಅನುವಂಶಿಕ ಮೊಕ್ತೇಸರ ಟಿ.ಶ್ರೀನಿವಾಸ ಭಟ್, ಪವಿತ್ರಪಾಣಿ ಶಂಕರನಾರಾಯಣ ಐತಾಳ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್, ಗೌರವಾ ಧ್ಯಕ್ಷ ಆನಂದ ಪಿ.ಸುವರ್ಣ, ಹರಿಯಪ್ಪಕೋಟ್ಯಾನ್, ಉಪಾಧ್ಯಕ್ಷ ರಮೇಶ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಜಿ. ಕೊಡವೂರು, ಕಾರ್ಯದರ್ಶಿ ಜನಾರ್ದನ ಕೊಡವೂರು ಮೊದಲಾದವರು ಉಪಸ್ಥಿತರಿದ್ದರು.


Spread the love

Exit mobile version