ಸಂವಿಧಾನ ಜಾಥಾಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ
ಭಾರತ ಸಂವಿಧಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸುವ ಸಲುವಾಗಿ ಜಿಲ್ಲೆಯಾದ್ಯಂತ ಸಂಚರಿಸಲಿರುವ ಸಂವಿಧಾನ ಜಾಥಾಗೆ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಚಾಲನೆ ನೀಡಿದರು.
ಸಂವಿಧಾನ ಮಹತ್ವದ ಅರಿವು ಮೂಡಿಸಲು ರಾಜ್ಯ ಸರ್ಕಾರದ ನಿರ್ದೇಶನದಂತೆ ಆರಂಭಗೊಂಡಿರುವ ಸಂವಿಧಾನ ಜಾಗೃತಿ ಜಾಥಾಕ್ಕೆ ಸಚಿವರು ಪುರಭವನ ಆವರಣದಲ್ಲಿ ಹಸಿರು ಬಾವುಟ ತೊರಿಸುವ ಮೂಲಕ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ಪ್ರತಿಮೆಗೆ ಪುಷ್ಪಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಪ್ರಾಯೋಜಕತ್ವದ ವಿವಿಧ ಕಲಾವಿದರು ಮತ್ತು ವಿದ್ಯಾರ್ಥಿಗಳು ಸಂವಿಧಾನದ ಮಹತ್ವ ಸಾರುವ ಘೋಷಣೆಗಳನ್ನು ಕೂಗಿ ಪಥ ಸಂಚಲನ ಮಾಡಿ, ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಕಲಾ ಮತ್ತು ಸಾಂಸ್ಕøತಿಕ ಮೆರಗು ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ನಮ್ಮ ಸಂವಿಧಾನವು ಎಲ್ಲ ನಾಗರೀಕರಿಗೂ ರಕ್ಷಣೆ ನೀಡಿದೆ. ದೇಶದಲ್ಲಿ ಅನೇಕ ಪದ್ಧತಿ, ಸಂಸ್ಕೃತಿ, ಜಾತಿ, ಭಾಷೆಗಳಿದ್ದರೂ ಎಲ್ಲರನ್ನೂ ಒಗ್ಗೂಡಿಸಿ ಮುಂದೆ ಸಾಗುತ್ತಿದೆ ಎಂದು ಹೇಳಿದರು.
ರಾಜ್ಯ ಸರಕಾರವು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಮೂಲಕ ದೇಶ ಸ್ಥಾಪನೆಯ ಉದ್ದೇಶವನ್ನು ಈಡೇರಿಸಲು ಹೊರಟಿದೆ. ಈ ದೇಶದಲ್ಲಿ ಸರ್ವರಿಗೂ ಅವಕಾಶವಿದೆ. ಎಲ್ಲರಿಗೂ ನ್ಯಾಯ ಕೊಡಿಸುವ ಜವಾಬ್ದಾರಿ ಸರಕಾರದ ಮೇಲಿದೆ. ನಾಗರೀಕರಿಗೂ ಹಕ್ಕು ಮತ್ತು ಕರ್ತವ್ಯಗಳಿವೆ. ಈ ಎಲ್ಲ ಮಾಹಿತಿಗಳನ್ನು ಸಂವಿಧಾನ ಜಾಥಾದಲ್ಲಿ ಅರಿವು ಮೂಡಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಪೊಲೀಸ್ ಆಯುಕ್ತರಾದ ಅನೂಪ್ ಅಗರವಾಲ್, ಜಿ.ಪಂ. ಸಿಇಓ ಡಾ.ಆನಂದ್, ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಉಪವಿಭಾಗಾಧಿಕಾರಿ ಹರ್ಷವರ್ಧನ, ಮಹಾನಗರಪಾಲಿಕೆ ಆಯುಕ್ತ ಆನಂದ್, ಉಪ ಆಯುಕ್ತ ಗಿರೀಶ್ ನಂದನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಾಲತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಹಾಗೂ ವಿವಿಧ ಸಂಘಟನೆಗಳ, ಇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.