ಸಣ್ಣ ಕೈಗಾರಿಕೆಗಳಿಗೆ ಸರಕಾರದ ನೆರವಿನ ಅಗತ್ಯವಿದೆ: ಕೆ.ಬಿ. ಅರಸಪ್ಪ
ಉಡುಪಿ: ಲಾಕ್ಡೌನ್ ಕಾರಣದಿಂದ ಸಂಕಷ್ಟಕ್ಕೀಡಾಗಿರುವ ರಾಜ್ಯದ ಸಣ್ಣ ಕೈಗಾರಿಕೆಗಳಿಗೆ ಸರಕಾರದಿಂದ ಹೆಚ್ಚಿನ ನೆರವಿನ ಅಗತ್ಯವಿದೆ ಎಂದು ರಾಜ್ಯ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಕೆ.ಬಿ.ಅರಸಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಸರಕಾರದಿಂದ ಕೈಗಾರಿಕಾ ವಲಯಗಳ ಸ್ಥಾಪನೆ ನಡೆಯುತ್ತಿಲ್ಲ, ಮಂಗಳೂರಿನಲ್ಲಿ ಬಂದರು ವ್ಯವಸ್ಥೆ ಇಲ್ಲ ಇದರ ಪೂರ್ಣ ಪ್ರಯೋಜನ ದೊರೆಯುತ್ತಿಲ್ಲ, ಬೆಂಗಳೂರಿನಿAದ ಮಂಗಳೂರಿಗೆ ಉತ್ತಮ ರಸ್ತೆ ನಿರ್ಮಿಸಿದ್ದಲ್ಲಿ ರಾಜ್ಯದಿಂದ ಹೆಚ್ಚಿನ ರಫ್ತು ಮಾಡಲು ಅವಕಾಶವಿದೆ, ಕರಾವಳಿ ಪ್ರದೇಶದಲ್ಲಿ ಆಹಾರ ಸಂಸ್ಕರಣೆ ಉದ್ದಿಮೆಗಳಿಗೆ ಹೆಚ್ಚಿನ ಅವಕಾಶವಿದೆ ಎಂದು ಅರಸಪ್ಪ ತಿಳಿಸಿದರು.
ಉಡುಪಿ ಜಿಲ್ಲೆಯಲ್ಲಿ 15280 ಸಣ್ಣ ಉದ್ದಿಮೆಗಳಿದ್ದು, ಸುಮಾರು 117000 ಜನರಿಗೆ ಉದ್ಯೋಗವಕಾಶ ಒದಗಿಸಲಾಗಿದೆ, ಹೊಸ ಉದ್ದಿಮೆಗಳ ಆರಂಭಕ್ಕೆ ಸೂಕ್ತ ಸ್ಥಳಾವಕಾಶ ಮತ್ತು ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಅವರು ಹೇಳಿದರು.
ರಾಜ್ಯ ಸಣ್ಣ ಕೈಗಾರಿಕೆಗಳ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಆರ್.ಜಗದೀಶ್, ಕಾಶಿಯಾ ಜಂಟಿ ಕಾರ್ಯದರ್ಶಿ ಜೈ ಕುಮಾರ್, ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಐ.ಆರ್.ಫೆರ್ನಾಂಡಿಸ್, ಉಪಾಧ್ಯಕ್ಷ ಪ್ರಶಾಂತ್ ಬಾಳಿಗ, ಕಾರ್ಯದರ್ಶಿ ವಲ್ಲಭ ಭಟ್ ಉಪಸ್ಥಿತರಿದ್ದರು.