Home Mangalorean News Kannada News ಸಪ್ಟೆಂಬರ್ 1: ಉಡುಪಿ ಜಿಲ್ಲೆಯಲ್ಲಿ 161 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಸಪ್ಟೆಂಬರ್ 1: ಉಡುಪಿ ಜಿಲ್ಲೆಯಲ್ಲಿ 161 ಮಂದಿಗೆ ಕೊರೋನಾ ಪಾಸಿಟಿವ್ ದೃಢ

Spread the love

ಸಪ್ಟೆಂಬರ್ 1: ಉಡುಪಿ ಜಿಲ್ಲೆಯಲ್ಲಿ 161 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 161 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 11757 ಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ ಉಡುಪಿಯ 85, ಕುಂದಾಪುರದ 57, ಕಾರ್ಕಳದ 13 ಹಾಗೂ ಇತರೆ ಜಿಲ್ಲೆಗಳ 6 ರೋಗಿಗಳು ಇದ್ದಾರೆ. 97 ಸೋಂಕಿತರಿಗೆ ರೋಗದ ಗುಣಲಕ್ಷಣಗಳು ಕಂಡುಬಂದರೆ 64 ಮಂದಿಗೆ ಲಕ್ಷಣಗಳು ಇಲ್ಲ.

ಪ್ರಾಥಮಿಕ ಸಂಪರ್ಕದಿಂದ 43, ಐಎಲ್ಐ ಲಕ್ಷಣಗಳಿರುವ 81, ‘ಸಾರಿ’ ಲಕ್ಷಣಗಳಿರುವ 3 ಹಾಗೂ ಹೊರ ಜಿಲ್ಲೆ, ಹೊರದೇಶಗಳ ಪ್ರಯಾಣ ಹಿನ್ನೆಲೆ ಹೊಂದಿರುವ 8 ಮಂದಿಗೆ ಸೋಂಕು ತಗುಲಿದ್ದು, 26 ಜನರ ಸೋಂಕಿನ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ.

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 930 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಮಂಗಳವಾರ 576 ವರದಿಗಳು ನೆಗೆಟಿವ್ ಬಂದಿದ್ದು, 161 ಪಾಸಿಟಿವ್ ಬಂದಿವೆ. 365 ವರದಿಗಳು ಬರುವುದು ಬಾಕಿ ಇದೆ.

ಜಿಲ್ಲೆಯಲ್ಲಿ ಮಂಗಳವಾರ 250 ಮಂದಿ ಗುಣಮುಖರಾಗಿದ್ದು ಇದುವರೆಗೂ 9351 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2307 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಜಿಲ್ಲೆಯಲ್ಲಿ ಇದುವರೆಗೆ ಕೊರೋನಾದಿಂದ ಒಟ್ಟು 97 ಮಂದಿ ಸಾವನಪ್ಪಿದ್ದಾರೆ.


Spread the love

Exit mobile version