ಸರಕಾರಿ ಬಸ್ ಚಾಲಕನ ಮೇಲೆ ಹಲ್ಲೆ: ನಾಲ್ವರು ಪೊಲೀಸ್ ವಶಕ್ಕೆ

Spread the love

ಸರಕಾರಿ ಬಸ್ ಚಾಲಕನ ಮೇಲೆ ಹಲ್ಲೆ: ನಾಲ್ವರು ಪೊಲೀಸ್ ವಶಕ್ಕೆ

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ದಾರಿ ನೀಡಿಲ್ಲ ಎಂಬ ಕಾರಣಕ್ಕೆ ಸರಕಾರಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಜಂಕ್ಷನ್ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತರನ್ನು ಬಂಟ್ವಾಳ ಬೋಳಂತೂರು ನಿವಾಸಿ ಶಿಯಾಬುದ್ದೀನ್ (22) ಮೊಹಮ್ಮದ್ ಇಲಿಯಾಸ್ (24) ಜಾಸೀರ್ (19) ಮೊಹಮ್ಮದ್ ಶಾಫಿ (19) ಎಂದು ಗುರುತಿಸಲಾಗಿದೆ.

ಮಂಗಳೂರುನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಸರಕಾರಿ ಬಸ್ ಹಿಂದಿನಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ದಾರಿ ನೀಡಿಲ್ಲ ಎಂದು ಆರೋಪಿಸಿ ದ್ವಿಚಕ್ರ ಸವಾರರು ಮಾಣಿ ಜಂಕ್ಷನ್ನಲ್ಲಿ ಬಸ್ನ್ನು ಅಡ್ಡಗಟ್ಟಿದ್ದರು. ಬಳಿಕ ಬಸ್ ಚಾಲಕನ ಜೊತೆ ಜಗಳಕ್ಕೆ ಇಳಿದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದರು.

ವಿಷಯ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಸ್ ಚಾಲಕ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love