ಸರಕಾರಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ : ಕಾರು ಚಾಲಕ ಸ್ಥಳದಲ್ಲೇ ಸಾವು

Spread the love

ಸರಕಾರಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ : ಕಾರು ಚಾಲಕ ಸ್ಥಳದಲ್ಲೇ ಸಾವು

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಕಾರು ಚಾಲಕ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯಲ್ಲಿ ರವಿವಾರ ರಾತ್ರಿ ನಡೆದಿದೆ.

ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದ ಬಾಳಪ್ಪ ಗೌಡರ ಪುತ್ರ ದಯೇಶ್ (26) ಮೃತರು ಎಂದು ಗುರುತಿಸಲಾಗಿದೆ.

ನೆಲ್ಯಾಡಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಇವರು ಚಲಾಯಿಸಿಕೊಂಡು ಹೋಗುತ್ತಿದ್ದ ಮಾರುತಿ ಶಿಫ್ಟ್ ಕಾರು ಮತ್ತು ಕಡಬಕ್ಕೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಕಾರು ಚಾಲಕ ದಯೇಶ್ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.

ದಯೇಶ್ ಪುತ್ತೂರಿನ ಗ್ಯಾಸ್ ಏಜೆನ್ಸಿಯೊಂದರಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಘಟನೆಯ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love