Home Mangalorean News Kannada News ಸರ್ಕಾರವು ವಿದ್ಯಾರ್ಥಿಗಳ ಪರ ನಿರ್ಧಾರವನ್ನು ತೆಗೆದುಕೊಳ್ಳಲು ಆಗ್ರಹಿಸಿ ದ.ಕ.ಜಿಲ್ಲಾ ಎನ್.ಎಸ್.ಯು.ಐ. ಪೋಸ್ಟರ್ ಅಭಿಯಾನ — ಶೌವಾದ್...

ಸರ್ಕಾರವು ವಿದ್ಯಾರ್ಥಿಗಳ ಪರ ನಿರ್ಧಾರವನ್ನು ತೆಗೆದುಕೊಳ್ಳಲು ಆಗ್ರಹಿಸಿ ದ.ಕ.ಜಿಲ್ಲಾ ಎನ್.ಎಸ್.ಯು.ಐ. ಪೋಸ್ಟರ್ ಅಭಿಯಾನ — ಶೌವಾದ್ ಗೂನಡ್ಕ

Spread the love

ಸರ್ಕಾರವು ವಿದ್ಯಾರ್ಥಿಗಳ ಪರ ನಿರ್ಧಾರವನ್ನು ತೆಗೆದುಕೊಳ್ಳಲು ಆಗ್ರಹಿಸಿ ದ.ಕ.ಜಿಲ್ಲಾ ಎನ್.ಎಸ್.ಯು.ಐ. ಪೋಸ್ಟರ್ ಅಭಿಯಾನ — ಶೌವಾದ್ ಗೂನಡ್ಕ

ಮಂಗಳೂರು: ಪ್ರಸ್ತುತ ಲಾಕ್ ಡೌನ್ ಸಂದರ್ಭದಲ್ಲಿ ಕರ್ನಾಟಕ ಸರ್ಕಾರವು ರಾಜ್ಯದ ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಪದವಿ ಶಿಕ್ಷಣದವರೆಗಿನ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಯಾವುದೇ ರೀತಿಯಲ್ಲೂ ಅವರಿಗೆ ತೊಂದರೆಯಾಗದ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಪರ ಉತ್ತಮ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಎನ್.ಎಸ್.ಯು.ಐ.ವತಿಯಿಂದ ಪೋಸ್ಟರ್ ಅಭಿಯಾನ ನಡೆಯಲಿದೆ ಎಂದು ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾದ ಶೌವಾದ್ ಗೂನಡ್ಕರವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ನಾನು ವಿದ್ಯಾರ್ಥಿ, ನನ್ನ ಭವಿಷ್ಯದ ರಕ್ಷಣೆ ಸರ್ಕಾರದ ಹೊಣೆ” ಎಂಬ ಶೀರ್ಷಿಕೆಯಡಿಯಲ್ಲಿ ನಾಳೆಯಿಂದ ಈ ಅಭಿಯಾನ ಶುರುವಾಗಲಿದೆ. ಜಿಲ್ಲೆಯ ಪ್ರಾಥಮಿಕ ವಿದ್ಯಾರ್ಥಿಗಳಿಂದ ಹಿಡಿದು ಪದವಿ ವಿದ್ಯಾರ್ಥಿಗಳವರೆಗೆ ಅವರವರ ಮನೆಯಿಂದಲೇ ಈ ಅಭಿಯಾನದಲ್ಲಿ ಭಾಗಿಯಾಗಲಿದ್ದಾರೆ. ವಿದ್ಯಾರ್ಥಿಗಳ ಬಗ್ಗೆ ಯಾವುದೇ ರೀತಿಯ ಗೊಂದಲದ ತೀರ್ಮಾನಗಳನ್ನು ತೆಗೆದುಕೊಳ್ಳದಂತೆ ಈ ಮೂಲಕ ಸರ್ಕಾರಕ್ಕೆ ಮನವಿ ಮಾಡಲಾಗುವುದು..ಈ ಅಭಿಯಾನವು ಮುಂದಿನ 1 ವಾರದವರೆಗೆ ಮುಂದುವರೆಯಲಿದ್ದು ಇದನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಸಂಬಂಧಪಟ್ಟವರ ಗಮನಕ್ಕೆ ತರಲಾಗುವುದು ಎಂದವರು ಹೇಳಿದ್ದಾರೆ.

ಆನ್ ಲೈನ್ ತರಗತಿಗಳನ್ನು ನೆಟ್ ವರ್ಕ್ ಸಮಸ್ಯೆಯಿಂದ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಆಲಿಸುವುದು ಕಷ್ಟ..ಅದೇ ರೀತಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಬೆಳಗ್ಗಿನ ಜಾವ ಬೇಗನೇ ಶಾಲೆಗೆ ಹೋಗಬೇಕೆಂಬ ನಿಯಮವನ್ನು ಜಾರಿಗೆ ತರಲು ಶಿಕ್ಷಣ ಇಲಾಖೆಯು ಪ್ರಸ್ತಾವನೆ ಸಲ್ಲಿಸಿರುವುದು ಸಮಂಜಸವಲ್ಲ..ಪದವಿ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ತರಗತಿಗಳನ್ನು ನಡೆಸದೇ ಇದ್ದಲ್ಲಿ ಸರಳ ವಿಧಾನದ ಪರೀಕ್ಷೆಯ ಮೂಲಕ ಅವರನ್ನು ತೇರ್ಗಡೆಗೊಳಿಸಬೇಕು..SSLC ಹಾಗೂ ಬಾಕಿ ಉಳಿದಿರುವ ದ್ವಿತೀಯ PUC ಇಂಗ್ಲೀಷ್ ಪರೀಕ್ಷೆಯನ್ನು ಅಪಾಯದ ಸನ್ನಿವೇಶದಲ್ಲಿ ಮಾಡುವುದು ಸರಿಯಲ್ಲ..ಇವೆಲ್ಲ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಸರ್ಕಾರವು ಒಂದು ಸ್ಪಷ್ಟ ನಿರ್ಧಾರಕ್ಕೆ ಬರಬೇಕು..ಅದೇ ರೀತಿ ವಿದ್ಯಾರ್ಥಿಗಳು ಪಡೆದ ಶೈಕ್ಷಣಿಕ ಸಾಲವನ್ನು ಮನ್ನಾ ಮಾಡಬೇಕೆಂದು ಹಾಗೂ ಬಾಕಿ ಉಳಿದಿರುವ ವಿದ್ಯಾರ್ಥಿ ವೇತನಗಳನ್ನು ಶೀಘ್ರವೇ ಬಿಡುಗಡೆ ಮಾಡಬೇಕೆಂದು ಈ ಅಭಿಯಾನದ ಮೂಲಕ ಸರ್ಕಾರಕ್ಕೆ ಆಗ್ರಹಿಸುತ್ತೇವೆಂದು ಶೌವಾದ್ ಗೂನಡ್ಕರವರು ಹೇಳಿದ್ದಾರೆ.


Spread the love

Exit mobile version