ಸರ್ಕಾರಿ ಬಸ್ಸಿಗಾಗಿ ಆಗ್ರಹಿಸಿ ಹಕ್ಲಾಡಿ ಗ್ರಾಮಸ್ಥರ ಪ್ರತಿಭಟನೆ

Spread the love

ಸರ್ಕಾರಿ ಬಸ್ಸಿಗಾಗಿ ಆಗ್ರಹಿಸಿ ಹಕ್ಲಾಡಿ ಗ್ರಾಮಸ್ಥರ ಪ್ರತಿಭಟನೆ

ಕುಂದಾಪುರ: ಹಕ್ಲಾಡಿ ಗ್ರಾಮದ ಸುತ್ತಮುತ್ತಲ ಹಳ್ಳಿಗಳಿಗೆ ಸರ್ಕಾರಿ ಬಸ್ ಓಡಿಸಬೇಕೆಂದು ಆಗ್ರಹಿಸಿ ಹಕ್ಲಾಡಿ ಗ್ರಾಮಸ್ಥರು ಸೋಮವಾರ ಹಕ್ಲಾಡಿ ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು.

ಹಕ್ಲಾಡಿ‌ ಗ್ರಾಮದ ಸುತ್ತಮುತ್ತಲ ಹಳ್ಳಿಗಳಾದ ದೇವಲ್ಕುಂದ, ಬಗ್ವಾಡಿ, ನೂಜಾಡಿ, ಬ್ರಹ್ಮೇರಿ, ಹಳ್ಳಿಜೆಡ್ಡು, ಹೊರ್ನಿ, ಕಟ್ಟಿನಮಕ್ಕಿ, ಮಾಣಿಕೊಳಲು, ಕುಂದಬಾರಂದಾಡಿ ಮಾರ್ಗವಾಗಿ ಕುಂದಾಪುರಕ್ಕೆ ಸರಕಾರಿ ಬಸ್ಸು ಓಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ನಾಡ ಗ್ರಾಮ ಪಂಚಾಯತ್ ಸದಸ್ಯ ರಾಜೀವ ಪಡುಕೋಣೆ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಜಿಲ್ಲಾ ಉಪಾಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಕೋಣಿ, ತಾಲೂಕು ಕಾರ್ಯದರ್ಶಿ ನಾಗರತ್ನ ನಾಡ ಹೋರಾಟಕ್ಕೆ ಬೆಂಬಲಿಸಿ ಮಾತನಾಡಿದರು.

ಈ ವೇಳೆಯಲ್ಲಿ ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ರಿ CWFI-CITU ಪ್ರಧಾನ ಕಾರ್ಯದರ್ಶಿ ಸಂತೋಷ್ ಹೆಮ್ಮಾಡಿ, ನಾಡ ಗ್ರಾಮ ಪಂಚಾಯತ್ ಸದಸ್ಯೆ ಶೋಭ ಕೆರೆಮನೆ,
ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಬೈಂದೂರು ಅಧ್ಯಕ್ಷೆ ಮನೋರಮ ಭಂಡಾರಿ, ಕುಂದಬಾರಂದಾಡಿ ಕಟ್ಟಡ ಕಾರ್ಮಿಕರ ಅಧ್ಯಕ್ಷ ಮಹಾದೇವ ಆಚಾರ್, ಕಾರ್ಯದರ್ಶಿ ಮಂಜುನಾಥ್ ಇದ್ದರು.

ಹಕ್ಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮ ದೇವಾಡಿಗ ಹಾಗೂ ಅಭಿವೃದ್ಧಿ ಅಧಿಕಾರಿ ಸತೀಶ್ ಅವರ ಮೂಲಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ‌ ಮನವಿ ನೀಡಲಾಯಿತು.


Spread the love