Home Mangalorean News Kannada News ಸಾಗರ: ಹಿರಿಯ ಸಾಹಿತಿ ಡಾ. ನಾ ಡಿಸೋಜ ನಿಧನ

ಸಾಗರ: ಹಿರಿಯ ಸಾಹಿತಿ ಡಾ. ನಾ ಡಿಸೋಜ ನಿಧನ

Spread the love

ಸಾಗರ: ಹಿರಿಯ ಸಾಹಿತಿ ಡಾ. ನಾ ಡಿಸೋಜ ನಿಧನ

ಸಾಗರ: ನಾಡಿನ ಹಿರಿಯ ಸಾಹಿತಿ ಡಾ.ನಾ ಡಿಸೋಜ (87), ಅನಾರೋಗ್ಯದಿಂದ ರವಿವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಇವರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದರು. ಮಡಿಕೇರಿಯಲ್ಲಿ ನಡೆದ 80 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು.

ಮೃತರು ಪತ್ನಿ ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಸೋಮವಾರ ಸಂಜೆ ಸಾಗರದಲ್ಲಿ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಮಂಗಳವಾರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿದೆ.


Spread the love

Exit mobile version