ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್, ಇಸ್ಲಾಂ ಧರ್ಮದ ಅವಹೇಳನ; ದೂರು ದಾಖಲಿಸಿದ ಯುವ ಕಾಂಗ್ರೆಸ್
ಮಂಗಳೂರು: ದ. ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಿಥುನ್ ರೈ ಮತ್ತು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಹೈಲ್ ಕಂದಕ್ ನೇತೃತ್ವದಲ್ಲಿ ಸಮಾಜಿಕ ಜಾಲತಾಣಗಳಲ್ಲಿ ಅಲ್ಲಾಹ ನಾಮವನ್ನು ಮತ್ತು ಇಸ್ಲಾಮ್ ಧರ್ಮದ ಪ್ರಮುಖ ಆರಾಧನಾ ಕರ್ಮವಾದ ನಮಾಝನ್ನು ಮತ್ತು ಭಾರತದ ಮಾಜಿ ಪ್ರಧಾನ ಮಂತ್ರಿಗಳಾದ ಇಂದಿರಾ ಗಾಂಧಿ, ಕಾಂಗ್ರೆಸ್ನ ಅಧ್ಯಕ್ಷರಾದ ರಾಹುಲ್ ಗಾಂಧಿ ಮತ್ತು ಕರ್ನಾಟಕದ ಮುಖ್ಯಮಂತ್ರಿಯಾದ ಸಿದ್ದರಾಮಯ್ಯರವರನ್ನು ಅಶ್ಲೀಲವಾಗಿ ಚಿತ್ರೀಕರಿಸಿ, ಅದನ್ನು ವಾಟ್ಸಪ್ ಗ್ರೂಪ್ಗಳಲ್ಲಿ ಹಾಕಿ ಸಮಾಜ ದ ಶಾಂತಿ ಕದಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮಂಗಳೂರು ಪೋಲಿಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಿರಣ್ ಬುಡ್ಲೆಗುತ್ತು, ಪ್ರಸಾದ್ ಮಲ್ಲಿ, ವರುಣ್ ಅಂಬಾಟ್, ಜಿಲ್ಲಾ ಕಾರ್ಯದರ್ಶಿಗಳಾದ ಮಹೇಶ್ ಬಂಟ್ವಾಳ, ಶಬೀರ್ ಕೆಂಪಿ, ಸೌಹಾನ್ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಗಿರೀಶ್ ಆಳ್ವ, ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಚಂದ್ರಹಾಸ್ ಸನಿಲ್, ಪುತ್ತೂರ್ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಯು.ಟಿ ತೌಸಿಫ್, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಅಭಿನಂದನ್ ಹರೀಶ್, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ರಮಾನಂದ ಪೂಜಾರಿ, ಆಶ್ರಫ್ ಅಡ್ಯಾರ್, ಯೂಸುಫ್ ಉಚ್ಚಿಲ, ಇಮ್ರಾನ್ ಬಂದರ್, ತೌಫೀಕ್ ಫಲ್ನೀರ್ ಉಪಸ್ಥಿತಿರಿದ್ದರು.